ಅಮೆರಿಕಾದ 45 ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ
ಅಮೆರಿಕ ಕಾಲಮಾನ ಬೆಳಿಗ್ಗೆ 11.30 (ಭಾರತೀಯ ಕಾಲಮಾನ ರಾತ್ರಿ 10:30) ಕ್ಕೆ ಅಮೆರಿಕಾದ 45 ನೇ ಅಧ್ಯಕ್ಷರಾಗಿ ಡೊನಾಲ್ಡ್ ಜೆ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Published On :
ವಾಷಿಂಗ್ ಟನ್: ಅಮೆರಿಕ ಕಾಲಮಾನ ಬೆಳಿಗ್ಗೆ 11.30 (ಭಾರತೀಯ ಕಾಲಮಾನ ರಾತ್ರಿ 10:30) ಕ್ಕೆ ಅಮೆರಿಕಾದ 45 ನೇ ಅಧ್ಯಕ್ಷರಾಗಿ ಡೊನಾಲ್ಡ್ ಜೆ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅಮೆರಿಕಾದ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಾಧೀಶ ಜಾನ್ ರಾಬರ್ಟ್ಸ್ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಇದಕ್ಕೂ ಮುನ್ನ ಅಮೆರಿಕಾದ ನಿಯೋಜಿತ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ಬೈಬಲ್ ನ ಅಧ್ಯಾಯಗಳನ್ನು ಪಠಿಸುವ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು.
ಟ್ರಂಪ್ ಭಾಷಣದ ಮುಖ್ಯಾಂಶ
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕಾದ ವೈಭವವನ್ನು ಮರಳಿ ತರುವುದಾಗಿ ಜನತೆಗೆ ಭರವಸೆ ನೀಡಿದ್ದಾರೆ. ಈ ವರೆಗೂ ಅಧಿಕಾರ ಎಂಬುದು ಕೇವಲ ವಾಷಿಂಗ್ ಟನ್ ಗೆ ಮಾತ್ರ ಸೀಮಿತವಾಗಿತ್ತು. ಆದರೆ ಇನ್ನು ಮುಂದಿನ ದಿನಗಳಲ್ಲಿ ನಿಜವಾದ ಅಧಿಕಾರ ಜನರಿಗೆ ಸಿಗಲಿದೆ ಹೊಸ ದೃಷ್ಟಿಕೋನದೊಂದಿಗೆ ಶ್ವೇತ ಭವನದಲ್ಲಿ ಅಧಿಕಾರ ನಡೆಯಲಿದೆ ಎಂದು ಟ್ರಂಪ್ ಭರವಸೆ ನೀಡಿದ್ದಾರೆ.
ಅಮೆರಿಕ ಮೊದಲು, ಅಮೆರಿಕಾದ ಜನತೆ ಮೊದಲೆಂಬ ಧ್ಯೇಯದೊಂದಿಗೆ ಆಡಳಿತ ನಡೆಸುವುದಾಗಿ ಭರವಸೆ ನೀಡಿರುವ ಟ್ರಂಪ್ ಈ ವರೆಗೂ ಆಡಳಿತ ವರ್ಗ ಮರೆತು ಹೋಗಿದ್ದ ಜನರನ್ನು( ಬಡಜನತೆಯನ್ನು) ಇನ್ನುಮುಂದಿನ ಆಡಳಿತ ಮರೆಯುವುದಿಲ್ಲ. ನಮ್ಮ ಕೆಲಸಗಳನ್ನು ಅನ್ಯರು ಕಸಿಯುವುದಕ್ಕೆ ಅವಕಾಶ ನೀಡುವುದಿಲ್ಲ. ಅಮೆರಿಕಾವನ್ನು ಅಮೆರಿಕಾದ ಉದ್ಯೋಗಿಗಳಿಂದಲೇ, ಅಮೆರಿಕಾದ ಕಾರ್ಮಿಕರಿಂದಲೇ ಹೊಸ ಎತ್ತರಕ್ಕೆ ಕೊಂಡೊಯ್ಯುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಇದೇ ವೇಳೆ ಇಸ್ಲಾಮಿಕ್ ಭಯೋತ್ಪಾದನೆ ವಿರುದ್ಧವೂ ಗುಡುಗಿರುವ ಡೊನಾಲ್ಡ್ ಟ್ರಂಪ್, ತಮ್ಮ ನೇತೃತ್ವದ ಸರ್ಕಾರ ಇಸ್ಲಾಮಿಕ್ ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


