ವಿದೇಶ

ಲಂಕಾ, ಯುಕೆ, ಆಸ್ಟ್ರೇಲಿಯಾಗೂ ವ್ಯಾಪಿಸಿದ ಜಲ್ಲಿಕಟ್ಟು ಪ್ರತಿಭಟನೆ

ಜಲ್ಲಿಕಟ್ಟು ಕ್ರೀಡೆಗೆ ಸುಪ್ರೀಂ ಕೋರ್ಟ್ ವಿಧಿಸಿರುವ ನಿಷೇಧವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಿಚ್ಚು ಶ್ರೀಲಂಕಾ, ಬ್ರಿಟನ್, ಆಸ್ಟ್ರೇಲಿಯಾಗೂ ವ್ಯಾಪಿಸಿದೆ.

ಲಂಕಾ, ಯುಕೆ, ಆಸ್ಟ್ರೇಲಿಯಾಗೂ ವ್ಯಾಪಿಸಿದ ಜಲ್ಲಿಕಟ್ಟು ಪ್ರತಿಭಟನೆ
ಜಲ್ಲಿಕಟ್ಟು
Published On :
ಲಂಡನ್/ಕೊಲಂಬೊ: ಜಲ್ಲಿಕಟ್ಟು ಕ್ರೀಡೆಗೆ ಸುಪ್ರೀಂ ಕೋರ್ಟ್ ವಿಧಿಸಿರುವ ನಿಷೇಧವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಿಚ್ಚು ಶ್ರೀಲಂಕಾ, ಬ್ರಿಟನ್, ಆಸ್ಟ್ರೇಲಿಯಾಗೂ ವ್ಯಾಪಿಸಿದೆ. 
ಶ್ರೀಲಂಕಾ, ಬ್ರಿಟನ್, ಆಸ್ಟ್ರೇಲಿಯಾದಲ್ಲಿರುವ ತಮಿಳು ಸಮುದಾಯದವರು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಲಂಡನ್ ನಲ್ಲಿರುವ ಭಾರತೀಯ ಹೈಕಮಿಷನ್ ಎದುರು ಪ್ರತಿಭಟನೆ ನಡೆಸಿದ್ದು, ಇಂಗ್ಲೆಂಡ್, ಐರ್ಲೆಂಡ್ ನ ಡುಬ್ಲಿನ್ ಗಳಲ್ಲಿ ಪ್ರತಿಭಟನೆಗಳು ನಡೆದಿವೆ. 
ಜಲ್ಲಿಕಟ್ಟು ಕ್ರೀಡೆಯನ್ನು ನಮ್ಮ ಸಂಸ್ಕೃತಿಯ ಭಾಗವೆಂದು ತೋರಿಸಲು ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿದ್ದಾರೆ. ಬ್ರಿಟನ್ ದೇಶದಲ್ಲಿ ಜಲ್ಲಿಕಟ್ಟು ಕ್ರೀಡೆ ಹಾಗೂ ಅದನ್ನು  ಜಲ್ಲಿಕಟ್ಟು ಕ್ರೀಡೆಯ ನಿಷೇಧವನ್ನು ವಿರೋಧಿಸಿ ಉಪವಾಸ ಪ್ರತಿಭಟನೆ ನಡೆಸಲು ಚಿಂತನೆ ನಡೆದಿದೆ ಎಂದು ಪ್ರತಿಭಟನಾ ನಿರತ ತಂಡದ ವಕ್ತಾರರೊಬ್ಬರು ಹೇಳಿದ್ದಾರೆ. ನಮ್ಮ ಸಂಸ್ಕೃತಿಯ ಗುರುತಾಗಿರುವ ಜಲ್ಲಿಕಟ್ಟು ಬೇಕೆಂಬ ಫಲಕಗಳನ್ನು ಹಿಡಿದು ವಿದೇಶದಲ್ಲಿರುವ ತಮಿಳು ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.