ಮೆಕ್ಸಿಕೋ, ಬ್ರಿಟನ್ ನಾಯಕರನ್ನು ಭೇಟಿ ಮಾಡಲಿರುವ ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಬ್ರಿಟನ್ ಪ್ರಧಾನಿ ಥೆರೇಸಾ ಮೇ, ಮೆಕ್ಸಿಕೋ ಅಧ್ಯಕ್ಷ ಎನ್ರೀಕ್ ಪೆನಾ ನೀಟೋ ಅವರನ್ನು ಭೇಟಿ ಮಾಡಲಿದ್ದಾರೆ

Published On :
ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಬ್ರಿಟನ್ ಪ್ರಧಾನಿ ಥೆರೇಸಾ ಮೇ, ಮೆಕ್ಸಿಕೋ ಅಧ್ಯಕ್ಷ ಎನ್ರೀಕ್ ಪೆನಾ ನೀಟೋ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಶ್ವೇತ ಭವನದ ವಕ್ತಾರರು ತಿಳಿಸಿದ್ದಾರೆ.
ಜನವರಿ 27 ರಂದು ಬ್ರಿಟನ್ ಪ್ರಧಾನಿ ಥೆರೇಸಾ ಮೇ ಅವರನ್ನು ಟ್ರಂಪ್ ಭೇಟಿ ಮಾಡಲಿದ್ದು, ಜ.31 ಕ್ಕೆ ಮೆಕ್ಸಿಕೋ ಅಧ್ಯಕ್ಷ ಎನ್ರಿಕ್ ಪೆನಾ ನೀಟೋ ಅವರೊಂದಿಗಿನ ಭೇಟಿ ನಿಗದಿಯಾಗಿದೆ ಎಂದು ಶ್ವೇತ ಭವನ ತಿಳಿಸಿದೆ. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಅಭಿನಂದನೆ ಸಲ್ಲಿಸಿದ್ದ ಥೆರೇಸಾ ಮೇ ಅಮೆರಿಕಾದೊಂದಿಗೆ ನಿಕಟ ದ್ವಿಪಕ್ಷೀಯ ಬಾಂಧವ್ಯ ಮುಂದುವರೆಸಲು ಉತ್ಸುಕರಾಗಿರುವುದುದಾಗಿ ಹೇಳಿದ್ದರು.
ಯುರೋಪಿಯನ್ ಒಕ್ಕೂಟದಿಂದ ಹೊರಬಂದ ನಂತರ ಬ್ರಿಟನ್ ಅಮೆರಿಕದ ನೂತನ ಅಧ್ಯಕ್ಷರೊಂದಿಗೆ ವಾಣಿಜ್ಯ ವಹಿವಾಟು ಯೋಜನೆಗಳು ಹಾಗೂ ಅದಕ್ಕೆ ಸಂಬಂಧಿಸಿದ ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮೆಕ್ಸಿಕೋ ಅಧ್ಯಕ್ಷ ಎನ್ರಿಕ್ ಪೆನಾ ನೀಟೋ ಅವರೊಂದಿಗೆ ವಾಣಿಜ್ಯ ವಹಿವಾಟು, ವಲಸೆ ಹಾಗೂ ಭದ್ರತೆಯ ವಿಷಯವಾಗಿ ಟ್ರಂಪ್ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಭೇಟಿDonald Trumpಡೊನಾಲ್ಡ್ ಟ್ರಂಪ್UK Prime Minister Theresa MayMexican presidentEnrique Pena Nietoಬ್ರಿಟನ್ ಪ್ರಧಾನಿ ಥೆರೇಸಾ ಮೇ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


