ವಿದೇಶ

ಮಾಧ್ಯಮಗಳ ವಿರುದ್ಧ ಸಮರ ಸಾರಿರುವ ಅಮೆರಿಕಾ ಅಧ್ಯಕ್ಷ ಟ್ರಂಪ್

ಪತ್ರಕರ್ತರನ್ನು ಮಾನವ ಕುಲದಲ್ಲೇ ಅತಿ ಅಪ್ರಾಮಾಣಿಕರು ಎಂದು ಆರೋಪಿಸಿ ವಿಶ್ವ ಮಾಧ್ಯಮಗಳಲ್ಲಿ...

ಮಾಧ್ಯಮಗಳ ವಿರುದ್ಧ ಸಮರ ಸಾರಿರುವ ಅಮೆರಿಕಾ ಅಧ್ಯಕ್ಷ ಟ್ರಂಪ್
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
Published On :
ವಾಷಿಂಗ್ಟನ್‌: ಪತ್ರಕರ್ತರನ್ನು ಮಾನವ ಕುಲದಲ್ಲೇ ಅತಿ ಅಪ್ರಾಮಾಣಿಕರು ಎಂದು ಆರೋಪಿಸಿ ವಿಶ್ವ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮಾಧ್ಯಮಗಳೊಂದಿಗೆ ಸಮರ ಮುಂದುವರಿಸುವ ಸೂಚನೆ ನೀಡಿದ್ದಾರೆ.
ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಸಾಕ್ಷಿಯಾಗಿದ್ದರು. ಆದರೆ, ಮುಂಜಾನೆ ಸುದ್ದಿ ಮಾಧ್ಯಮ ಖಾಲಿ ಮೈದಾನವನ್ನು ತೋರಿಸುತ್ತಿತ್ತು. ಕಾರ್ಯಕ್ರಮದಲ್ಲಿ ಜನರು ಭಾಗಿಯಾಗದೆ ಬಣಗುಡುತ್ತಿತ್ತು ಎಂಬ ಸುದ್ದಿ ಪ್ರಸಾರವಾಗುತ್ತಿತ್ತು. ಕಡಿಮೆ ಜನ ಭಾಗಿಯಾಗಿದ್ದರು ಎಂಬ ಸುಳ್ಳು ಸುದ್ದಿ ಪ್ರಕಟಿಸಿರುವ ಮಾಧ್ಯಮಗಳು ತಕ್ಕ ಪರಿಣಾಮವನ್ನು ಎದುರಿಸುತ್ತವೆ ಎಂದು ಅಮೆರಿಕ ನೂತನ ಅಧ್ಯಕ್ಷ ಟ್ರಂಪ್‌ ಹರಿಹಾಯ್ದಿದ್ದಾರೆ.
ಸೆಂಟ್ರಲ್‌ ಇಂಟೆಲಿಜೆನ್ಸ್‌ ಏಜೆನ್ಸಿ(ಸಿಐಎ) ಮುಖ್ಯ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಂಪ್‌, ಸಿಐಎ ಜತೆಗೆ ಮನಸ್ತಾಪವಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮಾಧ್ಯಮಗಳೊಂದಿಗೆ ನನ್ನ ಸಮರ ನಿರಂತರವಾಗಿದೆ. ಅವರು ಮಾನವ ಕುಲದಲ್ಲೇ ಅತಿ ಅಪ್ರಮಾಣಿಕರು ಎಂದು ಜರೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.