68ನೇ ಗಣರಾಜ್ಯೋತ್ಸವ: ತ್ರಿವರ್ಣ ಧ್ವಜ ಬೆಳಕಿನ ಮೂಲಕ "ಬುರ್ಜ್ ಖಲೀಫಾ" ಗೌರವ!
ಭಾರತೀಯ ಪ್ರಜೆಗಳು 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ತೊಡಗಿರುವಂತೆಯೇ ಅತ್ತ ಯುಎಇಯಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ತ್ರಿವರ್ಣ ಧ್ವಜದ ವಿಶೇಷ ಬೆಳಕಿನ ವ್ಯವಸ್ಥೆ ಮಾಡುವ ಮೂಲಕ ಗೌರವ ಸಲ್ಲಿಸಲಾಗಿದೆ.

ನವದೆಹಲಿ: ಭಾರತೀಯ ಪ್ರಜೆಗಳು 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ತೊಡಗಿರುವಂತೆಯೇ ಅತ್ತ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ತ್ರಿವರ್ಣ ಧ್ವಜದ ವಿಶೇಷ ಬೆಳಕಿನ ವ್ಯವಸ್ಥೆ ಮಾಡುವ ಮೂಲಕ ಗೌರವ ಸಲ್ಲಿಸಲಾಗಿದೆ.
68ನೇ ಗಣರಾಜ್ಯೋತ್ಸವ ನಿಮಿತ್ತ ದೆಹಲಿಗೆ ವಿಶೇಷ ಅತಿಥಿಯಾಗಿ ಯುಎಇ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅವರು ಆಗಮಿಸಿರುವಂತೆಯೇ ಅತ್ತ ಭಾರತ-ಯುಎಇ ಸ್ನೇಹವನ್ನು ಪ್ರತಿಬಿಂಬಿಸುವ ಸಲುವಾಗಿ ವಿಶ್ವದ ಅತೀ ಎತ್ತರದ ಕಟ್ಟಡ ಬುರ್ಜ್ ಖಲೀಫಾಗೆ ತ್ರಿವರ್ಣ ಧ್ವಜದ ಬೆಳಕಿನ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕ ಪ್ರದರ್ಶನ ಮಾಡಲಾಗಿದೆ. ಇಡೀ ಬುರ್ಜ್ ಖಲೀಫಾ ಕಟ್ಟಡಕ್ಕೆ ವಿಶೇಷ ಬೆಳಕಿನ ವ್ಯವಸ್ಥೆ ಮಾಡಿ ಅದರ ಮೂಲಕ ತ್ರಿವರ್ಣ ಧ್ವಜವನ್ನು ಪ್ರದರ್ಶನ ಮಾಡಲಾಯಿತು.
ಈ ಸಾರ್ವಜನಿಕ ಪ್ರದರ್ಶನ ಅಲ್ಲಿ ನೆರೆದಿದ್ದ ಸಾವಿರಾರು ಪ್ರವಾಸಿಗರ ಕಣ್ಮನ ಸೆಳೆಯಿತು. ಈ ವಿಶೇಷ ಬೆಳಕಿನ ವ್ಯವಸ್ಥೆ ಯುಎಇ ಹಾಗೂ ಭಾರತ ದೇಶಗಳ ನಡುವಿನ ಐಕಮತ್ಯವನ್ನು ಸಾರುತ್ತದೆ ಎಂದು ಬುರ್ಜ್ ಖಲೀಫಾದ ಮಾಲೀಕತ್ವ ಸಂಸ್ಥೆ ಇಮಾರ್ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


