ಇಸ್ಲಾಮಿಕ್ ಮೂಲಭೂತವಾದಿಗಳನ್ನು ಅಮೆರಿಕಾದಿಂದ ಹೊರಹಾಕಲು ಟ್ರಂಪ್ ಆದೇಶ
ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನಿರೀಕ್ಷಿತ ಆದೇಶಗಳನ್ನು ಹೊರಡಿಸುತ್ತಿರುವ ಡೊನಾಲ್ಡ್ ಟ್ರಂಪ್, ಈಗ ನಿರಾಶ್ರಿತರು ಹಾಗೂ 7 ಇಸ್ಲಾಮಿಕ್ ರಾಷ್ಟ್ರಗಳ ಜನರ ಪ್ರವೇಶಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

Published On :
ವಾಷಿಂಗ್ ಟನ್: ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನಿರೀಕ್ಷಿತ ಆದೇಶಗಳನ್ನು ಹೊರಡಿಸುತ್ತಿರುವ ಡೊನಾಲ್ಡ್ ಟ್ರಂಪ್, ಈಗ ನಿರಾಶ್ರಿತರು ಹಾಗೂ 7 ಇಸ್ಲಾಮಿಕ್ ರಾಷ್ಟ್ರಗಳ ಜನರ ಪ್ರವೇಶಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಚುನಾವಣೆಯ ಭರವಸೆಗಳ ಪೈಕಿ, ಇಸ್ಲಾಮಿಕ್ ರಾಷ್ಟ್ರಗಳಿಂದ ಬರುವ ನಿರಾಶ್ರಿತರು ಹಾಗೂ ಜನರು ಅಮೆರಿಕ ಪ್ರವೇಶಿಸದಂತೆ ಕಠಿಣ ನಿಯಮಗಳನ್ನು ಜಾರಿಗೊಳಿಸುವುದು ಪ್ರಮುಖವಾಗಿತ್ತು. ಈಗ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಡೊನಾಲ್ಡ್ ಟ್ರಂಪ್ ಇಸ್ಲಾಮಿಕ್ ರಾಷ್ಟ್ರಗಳಿಂದ ಅಮೆರಿಕಾಗೆ ಬರುವ ಜನರನ್ನು ನಿಯಂತ್ರಿಸುವುದಕ್ಕೆ ಕಠಿಣ ನಿಯಮಗಳನ್ನು ವಿಧಿಸಿ ಜ.27 ರಂದು ಆದೇಶ ಹೊರಡಿಸಿದ್ದಾೆರ
ಅಮೆರಿಕಾವನ್ನು ಉಗ್ರತತ್ವದ ಇಸ್ಲಾಮಿಕ್ ಭಯೋತ್ಪಾದಕರಿಂದ ರಕ್ಷಿಸಲು ಈ ಕ್ರಮ ಕೈಗೊಂಡಿರುವುದಾಗಿ ಆದೇಶ ಹೊರಡಿಸಿದ ನಂತರ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹೊರಗಿನ ಶತ್ರುಗಳು ಒಳನುಗ್ಗುವುದನ್ನು ತಡೆಗಟ್ಟಿ ದೆಶವನ್ನು ರಕ್ಷಿಸಲು ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿರುವ ಡೊನಾಲ್ಡ್ ಟ್ರಂಪ್, ಉಗ್ರವಾದದ ಇಸ್ಲಾಮಿಕ್ ಭಯೋತ್ಪಾದಕರು ನಮ್ಮ ದೇಶದಲ್ಲಿರುವುದು ಬೇಡ, ದೇಶವನ್ನು ಬೆಂಬಲಿಸುವ, ದೇಶದ ಜನರನ್ನು ಪ್ರೀತಿಸುವವರಷ್ಟೇ ಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


