ಎರಡು ದಿನಗಳ ನಂತರ ಪಾಕಿಸ್ತಾನದಲ್ಲಿ ಬಾಲಿವುಡ್ ಸಿನಿಮಾ ಪ್ರದರ್ಶನ
ರಡು ದಿನಗಳ ನಂತರ ಪಾಕಿಸ್ತಾನದಲ್ಲಿ ಬಾಲಿವುಡ್ ಸಿನಿಮಾಗಳನ್ನು ಪ್ರದರ್ಶಿಸಲಾಗುವುದು ಎಂದು ಪಾಕ್ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ...

ಇಸ್ಲಮಾಬಾದ್: ಎರಡು ದಿನಗಳ ನಂತರ ಪಾಕಿಸ್ತಾನದಲ್ಲಿ ಬಾಲಿವುಡ್ ಸಿನಿಮಾಗಳನ್ನು ಪ್ರದರ್ಶಿಸಲಾಗುವುದು ಎಂದು ಪಾಕ್ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ತಿಳಿಸಿದೆ.
ತಿಂಗಳ ಹಿಂದೆ ಬಾಲಿವುಡ್ ಸಿನಿಮಾಗಳ ಮೇಲಿನ ನಿಷೇಧವನ್ನು ರದ್ಧುಗೊಳಿಸಿದ ನಂತರ ಪ್ರಸಿದ್ದ ಬಾಲಿವುಡ್ ಸಿನಿಮಾಗಳನ್ನು ಎರಡು ದಿನಗಳ ನಂತರ ಪ್ರದರ್ಶಿಸುವುದಾಗಿ ಇಲಾಖೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ.
ಸಿನಿಮಾ ಆಮದುಗಾರರು ಭಾರತೀಯ ಸಿನಿಮಾದ ಹೆಸರು, ಕಲಾವಿದರು ಸೇರಿದಂತೆ ಹಲವು ವಿಷಯಗಳ ಬಗೆಗಿನೆ ದಾಖಲೆಗಳನ್ನು ಸೆನ್ಸಾರ್ ಮಂಡಳಿಗೆ ನೀಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ನೋಟಿಫಿಕೇಶನ್ ನಲ್ಲಿ ಹೇಳಿದೆ.
ಭಾರತೀಯ ಸಿನಿಮಾಗಳ ಆಮದು ಪ್ರಕ್ರಿಯೆಯಲ್ಲಿ ಪ್ರಸಕ್ತವಾಗಿ ಯಾವ ನಿಯಮಗಳಿವೆಯೋ ಅದರಂತೆ ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


