ಭಾರತದೊಂದಿಗೆ ರಕ್ಷಣಾ ಸಹಕಾರ ವೃದ್ಧಿ: 600 ಬಿಲಿಯನ್ ಡಾಲರ್ ಮೊತ್ತದ ಮಸೂದೆಗೆ ಅಮೆರಿಕಾ ಅಂಗೀಕಾರ!
ಭಾರತದೊಂದಿಗೆ ರಕ್ಷಣಾ ಸಹಕಾರ ವೃದ್ಧಿಗೊಳಿಸುವ ನಿಟ್ಟಿನಲ್ಲಿ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ 600 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಮಸೂದೆಯನ್ನು ಅಂಗೀಕರಿಸಿದೆ.

Published On :
ವಾಷಿಂಗ್ ಟನ್: ಭಾರತದೊಂದಿಗೆ ರಕ್ಷಣಾ ಸಹಕಾರ ವೃದ್ಧಿಗೊಳಿಸುವ ನಿಟ್ಟಿನಲ್ಲಿ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ 600 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಮಸೂದೆಯನ್ನು ಅಂಗೀಕರಿಸಿದೆ.
ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ ನಲ್ಲಿ ಭಾರತೀಯ-ಅಮೆರಿಕನ್ ಕಾಂಗ್ರೆಸ್ ಸದಸ್ಯರಾದ ಅಮಿ ಬೇರಾ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು, ಎನ್ ಡಿಎಎ-2018 ಮಸೂದೆಯನ್ನು ಅಂಗೀಕರಿಸಲಾಗಿದೆ. ಅಮೆರಿಕ ವಿಶ್ವದ ಅತ್ಯಂತ ಪುರಾತನ ಪ್ರಜಾಪ್ರಭುತ್ವವಾಗಿದ್ದು, ಭಾರತ ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವಾಗಿದೆ.
ಉಭಯ ರಾಷ್ಟ್ರಗಳ ನಡುವೆ ರಕ್ಷಣಾ ಸಹಕಾರವನ್ನು ವೃದ್ಧಿಸುವ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ. ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿರುವುದಕ್ಕೆ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ ಗೆ ಧನ್ಯವಾದ ತಿಳಿಸುತ್ತೇನೆ ಎಂದು ಬೇರಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


