ಗಣಿತದ ನೊಬೆಲ್ "ಫೀಲ್ಡ್ಸ್" ಪದಕ ವಿಜೇತೆ ಮರ್ಯಾಮ್ ಮಿರ್ಝಾಖನಿ ನಿಧನ
ಗಣಿತದ ನೊಬೆಲ್ ಪ್ರಶಸ್ತಿ ಎಂದೇ ಖ್ಯಾತಿ ಗಳಿಸಿರುವ ‘ಫೀಲ್ಡ್ಸ್’ ಪದಕ ಪಡೆದ ವಿಶ್ವದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಸ್ಟ್ಯಾನ್‌ಫೋರ್ಡ್ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಮರ್ಯಾಮ್ ಮಿರ್ಝಾಖನಿ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಟೆಹ್ರಾನ್: ಗಣಿತದ ನೊಬೆಲ್ ಪ್ರಶಸ್ತಿ ಎಂದೇ ಖ್ಯಾತಿ ಗಳಿಸಿರುವ ‘ಫೀಲ್ಡ್ಸ್’ ಪದಕ ಪಡೆದ ವಿಶ್ವದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಸ್ಟ್ಯಾನ್‌ಫೋರ್ಡ್ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಮರ್ಯಾಮ್ ಮಿರ್ಝಾಖನಿ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಹಲವು ತಿಂಗಳುಗಳಿಂದ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮರ್ಯಾಮ್ ಮಿರ್ಝಾಖನಿ ಅವರು ತಮ್ಮ 40ನೆ ವಯಸ್ಸಿನಲ್ಲಿ ಶನಿವಾರ ನಿಧನರಾಗಿದ್ದಾರೆ ಎಂದು ಸ್ಟ್ಯಾನ್‌ಫೋರ್ಡ್ ಅಧಿಕಾರಿಗಳು ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಗಣಿತ ಒಕ್ಕೂಟ ನಾಲ್ಕು ವರ್ಷಕ್ಕೊಮ್ಮೆ ಫೀಲ್ಡ್ಸ್ ಪದಕವನ್ನು ಪ್ರದಾನ ಮಾಡುತ್ತದೆ. ಈವರೆಗೆ, ಕೇವಲ 54 ಪುರುಷರು ಮತ್ತು ಓರ್ವ ಮಹಿಳೆ ಮಾತ್ರ ಈ ಪ್ರಶಸ್ತಿ ಪಡೆದಿದ್ದಾರೆ. ಈ ಪೈಕಿ ಪದಕ ಪಡೆದ ವಿಶ್ವದ ಏಕೈಕ ಮಹಿಳೆ ಎಂಬ ಕೀರ್ತಿಗೆ ಮರ್ಯಾಮ್ ಮಿರ್ಝಾಖನಿ ಪಾತ್ರರಾಗಿದ್ದಾರೆ.
ಇರಾನ್ ಸಂಜಾತೆ 40 ವರ್ಷದ ಮರ್ಯಮ್ ಅಮೆರಿಕದ ಸ್ಟಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ಗಣಿತ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಮಿರ್ಝಾಖನಿಯವರ ನಿಧನಕ್ಕೆ ಇರಾನ್ ಅಧ್ಯಕ್ಷ ಹಸನ್ ರೌಹಾನಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


