ವಿದೇಶ

ಸಿಕ್ಕಿಂ ಗಡಿ ವಿವಾದವನ್ನು ಉಭಯ ರಾಷ್ಟ್ರಗಳು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು: ಅಮೆರಿಕ ಆಗ್ರಹ

ಡೋಕ್ಲಾಮ್ ಸಂಬಂಧ ಭಾರತ ಹಾಗೂ ಚೀನಾ ನಡುವೆ ಉದ್ಭವಿಸಿರುವ ಬಿಕ್ಕಟ್ಟು ವಿಕೋಪಕ್ಕೆ ಹೋಗುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ...

ಸಿಕ್ಕಿಂ ಗಡಿ ವಿವಾದವನ್ನು ಉಭಯ ರಾಷ್ಟ್ರಗಳು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು: ಅಮೆರಿಕ ಆಗ್ರಹ
ಸಂಗ್ರಹ ಚಿತ್ರ
Published On :
ಬೀಜಿಂಗ್: ಡೋಕ್ಲಾಮ್ ಸಂಬಂಧ ಭಾರತ ಹಾಗೂ ಚೀನಾ ನಡುವೆ ಉದ್ಭವಿಸಿರುವ ಬಿಕ್ಕಟ್ಟು ವಿಕೋಪಕ್ಕೆ ಹೋಗುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ, ಉಭಯ ರಾಷ್ಟ್ರಗಳು ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವಂತೆ ಅಮೆರಿಕ ಆಗ್ರಹಿಸಿದೆ. 
ವಿವಾದ ಸಂಬಂಧ ಪ್ರತಿಕ್ರಿಯ ನೀಡಿರುವ ಅಮೆರಿಕ ಸರ್ಕಾರಿ ವಕ್ತಾರ ಹೀದರ್ ನೌರ್ಟ್ ಅವರು, ಭಾರತ ಹಾಗೂ ಚೀನಾ ನಡುವೆ ಉಂಟಾಗಿರುವ ಬಿಕ್ಕಟ್ಟು ಹಾಗೂ ಪರಿಸ್ಥಿತಿಗಳ ಕುರಿತು ಅಮೆರಿಕಾ ಕಳವಳ ವ್ಯಕ್ತಪಡಿಸುತ್ತಿದೆ. ವಿವಾದವನ್ನು ಭಾರತ ಹಾಗೂ ಚೀನಾ ರಾಷ್ಟ್ರಗಳು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ. 
ಎರಡು ದೇಶಗಳು ವಿವಾದ ಕುರಿತು ಮಾತುಕತೆ ನಡೆಸಬೇಕು. ಮಾತುಕತೆ ಬಳಿಕ ಶಾಂತಿಯುತವಾಗಿ ಒಪ್ಪಂದ ಮಾಡಿಕೊಂಡು ವಿವಾದವನ್ನು ಬಗೆಹರಿಸಿಕೊಳ್ಳಬೇಕಿದೆ. ಉಭಯ ರಾಷ್ಟ್ರಗಳ ನಡುವೆ ಎದುರಾಗಿರುವ ಬಿಕ್ಕಟ್ಟು ಶಮನಗೊಳಿಸುವ ಸಲುವಾಗಿ ಭಾರತ ಹಾಗೂ ಚೀನಾ ನೇರವಾಗಿ ಮಾತುಕತೆ ನಡೆಸುವಂತೆ ಈ ಮೂಲಕ ಆಗ್ರಹಿಸುತ್ತೇವೆಂದು ತಿಳಿಸಿದ್ದಾರೆ. 
ಕಳೆದ ಒಂದು ತಿಂಗಳಿನಿಂದ ಭಾರತ–ಚೀನಾ ಗಡಿಯ ಸಿಕ್ಕಿಂ ವಲಯದಲ್ಲಿ ಸಂಘರ್ಷ ನಡೆಯುತ್ತಿದ್ದು, ಗಡಿ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಚೀನೀ ಸೈನಿಕರು ಅಲ್ಲಿ ಇದ್ದ ಭಾರತೀಯ ಬಂಕರ್ ಗಳನ್ನು ನಾಶ ಮಾಡಿದ್ದರು.  ಇದೇ ಕಾರಣಕ್ಕೆ ಗಡಿ ಗಸ್ತು ನಡೆಸುವ ಯೋಧರಿಗೆ ಬೆಂಬಲವಾಗಿ ಇನ್ನಷ್ಟು ಸೈನಿಕರನ್ನು ಕಳುಹಿಸಲಾಗಿತ್ತು. ಯುದ್ಧ ಮಾಡುವ ಉದ್ದೇಶಕ್ಕೆ ಅಲ್ಲ ಎಂದು ಭಾರತ ಸ್ಪಷ್ಟಪಡಿಸಿತ್ತು. ಜೂನ್‌ 6 ಘಟನೆ ಬಳಿಕ ಇಂಡೋ-ಚೀನಾ ಗಡಿ ಪ್ರಕ್ಷುಬ್ದಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.