ವಿದೇಶ

ಗ್ರೀಕ್ ನಲ್ಲಿ ಪ್ರಬಲ ಭೂಕಂಪ: ಇಬ್ಬರ ಸಾವು, 100 ಮಂದಿಗೆ ಗಾಯ

ಗ್ರೀಕ್ ನ ಕೋಸ್ ಐಲ್ಯಾಂಡ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಇಬ್ಬರು ಬಲಿಯಾಗಿದ್ದು 100 ಕ್ಕೂ ಹೆಚ್ಚು ಮಂದಿ...

ಗ್ರೀಕ್ ನಲ್ಲಿ ಪ್ರಬಲ ಭೂಕಂಪ: ಇಬ್ಬರ ಸಾವು, 100 ಮಂದಿಗೆ ಗಾಯ
ಗ್ರೀಕ್ ನಲ್ಲಿ ಸಂಭವಿಸಿರುವ ಪ್ರಬಲ ಭೂಕಂಪನ
Published On :
ಕೋಸ್: ಗ್ರೀಕ್ ನ ಕೋಸ್ ಐಲ್ಯಾಂಡ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಇಬ್ಬರು ಬಲಿಯಾಗಿದ್ದು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 
ಶುಕ್ರವಾರ ಬೆಳಗಿನ ಜಾವದ ವೇಳೆ 6.5  ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಮಿ ನಡುಗಿದ ತೀವ್ರತೆಗೆ ಅನೇಕ ಕಟ್ಟಡಗಳು ಹಾನಿಗೊಂಡಿವೆ. 
ಟರ್ಕಿಶ್ ಕರಾವಳಿಯಲ್ಲಿ ರಿಕ್ಟರ್‌ ಮಾಪಕದಲ್ಲಿ 6.3 ತೀವ್ರತೆಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಅದಾದ ನಂತರ ಸುಮಾರು 20 ಬಾರಿ ಭೂಮಿ ಕಂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪನದ ಕೇಂದ್ರ ಬಿಂದು ಗ್ರೀಸ್ ಮತ್ತು ಟರ್ಕಿ ನಡುವಿನ ಸಮುದ್ರದಲ್ಲಿ ಕಂಪ ಸಂಭವಿಸಿದೆ. ಎರಡೂ ದೇಶಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಕಾಸ್ ನಗರಕ್ಕೆ ಹೆಚ್ಚಿನ ಹಾನಿಯಾಗಿದೆ.
ನಗರದಲ್ಲಿ ನ ಹಳೇಯ ಕಟ್ಟಡಗಳಿಗೆ ಹೆಚ್ಚಿನ ಹಾನಿಯಾಗಿದೆ. ಕಟ್ಟಡಗಳೊಳಗೆ ಜನ ಸಿಲುಕಿದ್ದಾರೆಯೇ ಎಂಬ ಅನುಮಾನದಿಂದ ರಕ್ಷಣಾ ಪಡೆ ಮನೆಗಳೊಳಗೆ ಪರಿಶೀಲನೆ ನಡೆಸಿದ್ದಾರೆ. ಸೇನಾಪಡೆ ತುರ್ತು ಸೇವೆಯನ್ನು ಒದಗಿಸಿ, ರಕ್ಷಣಾ ಪರಿಹಾರ ಕಾರ್ಯದಲ್ಲಿ ತೊಡಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.