ಎಲ್ಲಾ ಕ್ಷೇತ್ರದಲ್ಲೂ ಹೂಡಿಕೆಗೆ ಅವಕಾಶವಿದೆ, ಭಾರತದಲ್ಲಿ ಆಕಾಶವೇ ಮಿತಿ: ಪ್ರಧಾನಿ ಮೋದಿ
ಭಾರತದಲ್ಲಿ ನಿರ್ಮಾಣ, ಆರೋಗ್ಯ, ರಕ್ಷಣೆ, ರೈಲ್ವೆ ಮತ್ತು ಸೇವಾ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ....

Published On :
ಸೇಂಟ್ ಪೀಟರ್ಸ್ ಬರ್ಗ್: ಭಾರತದಲ್ಲಿ ನಿರ್ಮಾಣ, ಆರೋಗ್ಯ, ರಕ್ಷಣೆ, ರೈಲ್ವೆ ಮತ್ತು ಸೇವಾ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ಉದ್ಯಮಿಗಳಿಗೆ ಆಹ್ವಾನ ನೀಡಿದ್ದಾರೆ.
ಇಂದು ಸೇಂಟ್ ಪೀಟರ್ಸ್ ಬರ್ಗ್ ನಲ್ಲಿ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಷ್ಟು ದಿನ ಭಾರತ ಹೂಡಿಕೆಗೆ ಉತ್ತಮ ತಾಣವಾಗಿರಲಿಲ್ಲ. ಆದರೆ ಈಗ ಉತ್ತಮ ತಾಣವಾಗಿದೆ. ಎಲ್ಲಾ ಕ್ಷೇತ್ರದಲ್ಲೂ ಹೂಡಿಕೆ ಮಾಡಲು ಅವಕಾಶವಿದೆ. ಭಾರತದಲ್ಲಿ ಹೂಡಿಕೆಗೆ ಆಕಾಶವೇ ಮಿತಿ ಎಂದು ಹೇಳಿದ್ದಾರೆ.
ಭಾರತದಲ್ಲಿ ಹೂಡಿಕೆ ಉತ್ತಮ ಅವಕಾಶ ಕಲ್ಪಿಸುವುದಕ್ಕಾಗಿ ನಾವು ಸುಮಾರು 1,200 ಕಾನೂನುಗಳನ್ನು ತೆಗೆದು ಹಾಕಿದ್ದೇವೆ. ಇದು ನಮ್ಮ 'ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತ' ಎಂಬ ತತ್ವವನ್ನು ತೋರಿಸುತ್ತದೆ ಎಂದಿದ್ದಾರೆ.
ವಿಶ್ವದಲ್ಲೇ ಭಾರತ ವಿದೇಶಿ ಹೂಡಿಕೆಗೆ ಮೂರನೇ ಅತ್ಯಂತ ಅನುಕೂಲಕರ ದೇಶವೆಂದು ಎಲ್ಲಾ ಅಂತಾರಾಷ್ಟ್ರೀಯ ಕ್ರೆಡಿಟ್ ರೇಟಿಂಗ್ ಸಂಸ್ಥೆಗಳು ಹೇಳುತ್ತಿವೆ. ಅಲ್ಲದೆ ಭಾರತ ಅತ್ಯಂತ ವೇಗವಾಗಿ ಆರ್ಥಿಕ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿದ್ದು, ಭಾರತದಲ್ಲಿ ಹೂಡಿಕೆ ಮಾಡುವಂತೆ 127 ಕೋಟಿ ಜನ ನಿಮಗೆ ಆಹ್ವಾನ ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಜೂನ್ 1ರಿಂದ 3ರವರೆಗೆ ನಡೆಯುತ್ತಿರುವ ಜೇಂಟ್ ಪೀಟರ್ಸ್ ಬರ್ಗ್ ಅಂತರಾಷ್ಟ್ರೀಯ ಆರ್ಥಿಕ ವೇದಿಕೆ ಕಾರ್ಯದಲ್ಲಿ ವಿಶ್ವದಾದ್ಯಂತ ಸಾವಿರಾರು ದೊಡ್ಡ ದೊಡ್ಡ ಉದ್ಯಮಿಗಳು ಭಾವಗಿಸಿದ್ದು, ಇದೇ ಮೊದಲ ಬಾರಿಗೆ ಅತಿಥಿ ರಾಷ್ಟ್ರವಾಗಿ ಭಾರತಕ್ಕೆ ಆಹ್ವಾನ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


