ವಿದೇಶ

ಕಾಬೂಲ್‌ನಲ್ಲಿನ ಭಾರತದ ಅತಿಥಿಗೃಹದ ಬಳಿ ರಾಕೆಟ್ ದಾಳಿ: ವರದಿ

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಭಾರತದ ಅತಿಥಿಗೃಹದ ಬಳಿ ಉಗ್ರರು ರಾಕೆಟ್ ದಾಳಿ ನಡೆಸಿದ್ದಾರೆ...

ಕಾಬೂಲ್‌ನಲ್ಲಿನ ಭಾರತದ ಅತಿಥಿಗೃಹದ ಬಳಿ ರಾಕೆಟ್ ದಾಳಿ: ವರದಿ
ರಾಕೆಟ್ ದಾಳಿ(ಸಂಗ್ರಹ ಚಿತ್ರ)
Published On :
ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಭಾರತದ ಅತಿಥಿಗೃಹದ ಬಳಿ ಉಗ್ರರು ರಾಕೆಟ್ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕಾಬೂಲ್‌ನ ಡಿಪ್ಲೋಮಾಟಿಕ್ ಎನ್ ಕ್ಲೇವ್ ಮೇಲೆ ಉಗ್ರರು ರಾಕೆಟ್ ದಾಳಿ ನಡೆಸಿದ್ದು ರಾಕೆಟ್ ರಾಯಭಾರಿ ಮನೆಯ ಪಕ್ಕದ ಟೆನಿಸ್ ಕೋರ್ಟ್ ನಲ್ಲಿ ಬಿದ್ದಿದ್ದು ರಾಕೆಟ್ ದಾಳಿಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಇನ್ನು ರಾಕೆಟ್ ದಾಳಿ ನಡೆದ ಬಗ್ಗೆ ಭಾರತೀಯ ರಾಯಭಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 
ಅಫ್ಗಾನಿಸ್ತಾನ್ ಅಧ್ಯಕ್ಷ ಅಶ್ರಫ್ ಗನಿ ಅವರು ಇಂದು ಶಾಂತಿ ಸಮಾವೇಶಕ್ಕೆ ಚಾಲನೆ ನೀಡಿದ್ದು ಇದೇ ದಿನ ರಾಕೆಟ್ ದಾಳಿ ನಡೆದಿದೆ. ಇನ್ನು ಶಾಂತಿ ಸಮಾವೇಶದಲ್ಲಿ ಜಗತ್ತಿನ 30 ದೇಶದ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಕಳೆದ ವಾರ ಕಾಬೂಲ್ ನಲ್ಲಿನ ಭಾರತೀಯ ರಾಯಭಾರಿ ಕಚೇರಿ ಬಳಿ ಆತ್ಮಾಹುತಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು ಇದರಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.