ಆಸ್ಟ್ರೇಲಿಯಾದಲ್ಲಿ ಇಸಿಸ್ ಹೆಸರಲ್ಲಿ ಉಗ್ರರ ದಾಳಿ: 2 ಸಾವು, 3 ಪೊಲೀಸರಿಗೆ ಗಾಯ
ಆಸ್ಟ್ರೇಲಿಯಾದಲ್ಲಿ ಶಂಕಿತ ಭಯೋತ್ಪಾದಕರ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಉಗ್ರ ಸೇರಿ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ...

Published On :
ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ಶಂಕಿತ ಭಯೋತ್ಪಾದಕರ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಉಗ್ರ ಸೇರಿ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಮೆಲ್ಬರ್ನ್ ನ ಸೆಂಟ್ರಲ್ ಬ್ಯುಸಿನೆಸ್ ಜಿಲ್ಲೆಯ ಬ್ರೈಟಾನ್ ನ ಅಪಾರ್ಟ್ ಮೆಂಟ್ ಒಂದರಲ್ಲಿ ಇಸಿಸ್ ಉಗ್ರ ಸಂಘಟನೆಯ ಹೆಸರಿನಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಒತ್ತೆಯಾಳಾಗಿರಿಸಿಕೊಂಡು ದಾಳಿ ನಡೆಸಿದ್ದ. ಈ ವೇಳೆ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದ ಸೇನಾ ಪಡೆ ಅಪಾರ್ಟ್ ಮೆಂಟ್ ಗೆ ನುಗ್ಗಿ ಆಕ್ರಮಣಕಾರನನ್ನು ಹೊಡೆದುರುಳಿಸಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಕೂಡ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಮೆಲ್ಬರ್ನ್‌ನ ಸೆಂಟ್ರಲ್ ಬ್ಯುಸಿನೆಸ್ ಜಿಲ್ಲೆಯ ಬ್ರೈಟಾನ್‌ನ ಅಪಾರ್ಟ್‌ಮೆಂಟ್ ಒಂದರಲ್ಲಿ ಐಸಿಸ್ ಹೆಸರಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ಮಹಿಳೆಯೊ ಬ್ಬರನ್ನು ಒತ್ತೆಸೆರೆ ಹಿಡಿದಿದ್ದ. ಪೊಲೀಸರು ಅಪಾರ್ಟ್‌ಮೆಂಟ್‌ಗೆ ನುಗ್ಗಿ ಕಾರಾರಯಚರಣೆ ನಡೆಸಿದ್ದು, ಆಕ್ರಮಣಕಾರನನ್ನು ಹೊಡೆದುರುಳಿಸಿ ದ್ದಾರೆ. ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ಮತ್ತೊಂದು ಶವ ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


