ವಿದೇಶ

ಲಂಡನ್ ಅಪಾರ್ಟ್ ಮೆಂಟ್ ನಲ್ಲಿ ಭೀಕರ ಅಗ್ನಿ ಅವಘಡ; ಹಲವು ನಿವಾಸಿಗಳು ಸಿಲುಕಿರುವ ಶಂಕೆ!

ಲಂಡನ್ ನ ವಸತಿ ಸಮುಚ್ಛಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 27 ಅಂತಸ್ತಿನ ಕಟ್ಟಡದಲ್ಲಿರುವ ನೂರಾರು ಅಪಾರ್ಟ್ ಮೆಂಟ್ ಗಳಿಗೆ ಬೆಂಕಿ ವ್ಯಾಪಿಸಿದೆ.

ಲಂಡನ್ ಅಪಾರ್ಟ್ ಮೆಂಟ್ ನಲ್ಲಿ ಭೀಕರ ಅಗ್ನಿ ಅವಘಡ; ಹಲವು ನಿವಾಸಿಗಳು ಸಿಲುಕಿರುವ ಶಂಕೆ!
ಅಗ್ನಿಗಾಹುತಿಯಾಗಿರುವ ಕಟ್ಟಡ
Published On :

ಲಂಡನ್: ಲಂಡನ್ ನ ವಸತಿ ಸಮುಚ್ಛಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 27 ಅಂತಸ್ತಿನ ಕಟ್ಟಡದಲ್ಲಿರುವ ನೂರಾರು ಅಪಾರ್ಟ್ ಮೆಂಟ್ ಗಳಿಗೆ ಬೆಂಕಿ ವ್ಯಾಪಿಸಿದೆ.

ಲಂಡನ್ನಿನ ನಾರ್ಥ್ ಕೆನ್ಸಿಂಗ್ಟನ್ ನಲ್ಲಿರುವ ಲಾಟಿಮರ್ ರಸ್ತೆಯ ಲ್ಯಾಂಕೆಸ್ಟರ್ ವೆಸ್ಟ್ ಎಸ್ಟೇಟ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, 27 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ  ಒಳಗೆ ನೂರಾರು ಮಂದಿ ಇದ್ದು ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಬೆಂಕಿ ನಂದಿಸಲು ಸುಮಾರು 40 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳ ಸುಮಾರು 200ಕ್ಕೂ ಹೆತ್ತು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅಧಿಕಾರಿಗಳ  ತಿಳಿಸಿರುವಂತೆ ಈ ಅಪಾರ್ಟ್ ಮೆಂಟಿನಲ್ಲಿ 120 ಮನೆಗಳಿದ್ದು, ಇದುವರೆಗೂ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.

ಆದರೆ ಅತಿಯಾದ ಹೊಗೆಯಿಂದಾಗಿ ಇಬ್ಬರು ನಿವಾಸಿಗಳು ಗಂಭೀರವಾಗಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.