ವಿದೇಶ

ಪೋರ್ಚುಗಲ್'ನಲ್ಲಿ ಭೀಕರ ಕಾಡ್ಗಿಚ್ಚು: 25 ಸಾವು, 16 ಜನರಿಗೆ ಗಾಯ

ಮಧ್ಯ ಪೋರ್ಚುಗಲ್ ನಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಘಟನೆಯಲ್ಲಿ 25 ಜನರು ಸಾವನ್ನಪ್ಪಿ 16ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...

ಪೋರ್ಚುಗಲ್'ನಲ್ಲಿ ಭೀಕರ ಕಾಡ್ಗಿಚ್ಚು: 25 ಸಾವು, 16 ಜನರಿಗೆ ಗಾಯ
ಪೋರ್ಚುಗಲ್'ನಲ್ಲಿ ಭೀಕರ ಕಾಡ್ಗಿಚ್ಚು: 25 ಸಾವು, 16 ಜನರಿಗೆ ಗಾಯ
Published On :

ಲಿಸ್ಬನ್: ಮಧ್ಯ ಪೋರ್ಚುಗಲ್ ನಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಘಟನೆಯಲ್ಲಿ 25 ಜನರು ಸಾವನ್ನಪ್ಪಿ 16ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.

ಕಾಡ್ಗಿಚ್ಚು ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಸಾವಿರಾರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿರುವ ಕಾರ್ಯಾಚರಣೆಯನ್ನು ಮಾಡುತ್ತಿದ್ದಾರೆ. 

ದುರಂತದಲ್ಲಿ ಈ ವರೆಗೂ 25 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ದುರ್ಘಟನೆಯಲ್ಲಿ ಬಹುತೇಕ ಜನರು ಕಾರುಗಳಲ್ಲಿಯೇ ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ. 

ಈ ಹಿಂದೆಂದೂ ನೋಡಿರದ ಮಹಾದುರಂತ ಇದಾಗಿದೆ. ಪ್ರಸ್ತುತ ಹೊತ್ತಿಕೊಂಡಿರುವ ಬೆಂಕಿಯನ್ನು ನಿಯಂತ್ರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದ್ದು, ನಂತರವಷ್ಟೇ ಕಾಡ್ಗಿಚ್ಚು ಸಂಭವಿಸಿರುವುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಪೋರ್ಚುಗಲ್ ಪ್ರಧಾನಮಂತ್ರಿ ಆಂಟೋನಿಯೊ ಕೋಸ್ಟಾ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.