ಚೀನಾದಲ್ಲಿ ಭೀಕರ ಭೂಕುಸಿತ; 100ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ!
ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಕನಿಷ್ಛ 100 ಮಂದಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಚೀನಾ ಮಾಧ್ಯಮ ವರದಿ ಮಾಡಿದೆ.

Published On :
ಬೀಜಿಂಗ್: ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಕನಿಷ್ಛ 100 ಮಂದಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಚೀನಾ ಮಾಧ್ಯಮ ವರದಿ ಮಾಡಿದೆ.
ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದ ಕ್ಸಿನ್ ಮೋ ಗ್ರಾಮದ ಗುಡ್ಡು ಕುಸಿತ ಪರಿಣಾಮ ಅಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಅಂತೆಯೇ ಅದರೊಳಗಿದ್ದ ಸುಮಾರು 100ಕ್ಕೂ ಅಧಿಕ ಮಂದಿ ಮಣ್ಣಿನ ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಪ್ರಸ್ತುತ ವಿಚಾರ ತಿಳಿಯುತ್ತಿದ್ದಂತೆಯೇ ಚೀನಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸುಮಾರು 1 ಕಿ.ಮೀ ವರಗೂ ಮಣಿನ ರಾಶಿ ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


