ಟ್ರಂಪ್ ವೈಟ್ ಹೌಸ್ ಔತಣ ಕೂಟದಲ್ಲಿ ಭಾಗಿಯಾಗಲಿರುವ ವಿಶ್ವದ ಮೊದಲ ನಾಯಕ ಮೋದಿ!
ಪ್ರಧಾನಿ ನರೇಂದ್ರ ಮೋದಿ ಜೂ.24 ರಿಂದ ವಿದೇಶ ಪ್ರವಾಸ ಕೈಗೊಂಡಿದ್ದು, ಜೂ.25-26 ರಂದು ಅಮೆರಿಕ ಪ್ರವಾಸದಲ್ಲಿರಲಿದ್ದಾರೆ.

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೂ.24 ರಿಂದ ವಿದೇಶ ಪ್ರವಾಸ ಕೈಗೊಂಡಿದ್ದು, ಜೂ.25-26 ರಂದು ಅಮೆರಿಕ ಪ್ರವಾಸದಲ್ಲಿರಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಡೊನಾಲ್ಡ್ ಟ್ರಂಪ್ ಅವರೊಂದಿಗೆ ಶ್ವೇತ ಭವನದಲ್ಲಿ ಭೋಜನ ಸವಿಯುವ ಕಾರ್ಯಕ್ರಮ ನಿಗದಿಯಾಗಿದ್ದು, ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಭೋಜನ ಸವಿಯುವ ವಿಶ್ವದ ಮೊದಲ ನಾಯಕ ನರೇಂದ್ರ ಮೋದಿಯವರಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯನ್ನು ವಿಶೇಷವಾಗಿಸಲು ಶ್ವೇತ ಭವನ ತಯಾರಿ ನಡೆಸಿದ್ದು, " ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಂಪು ಹಾಸಿನ ಸ್ವಾಗತ ದೊರೆಯಲಿದೆ, ಅಷ್ಟೇ ಅಲ್ಲದೇ ಇಬ್ಬರೂ ನಾಯಕರು ಶ್ವೇತ ಭವನದಲ್ಲಿ ನಡೆಯಲಿರುವ ವ್ಯವಹಾರಿಕ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.
ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ವಿದೇಶದ ನಾಯಕರೊಬ್ಬರು ಟ್ರಂಪ್ ಅವರೊಂದಿಗೆ ಶ್ವೇತ ಭವನದಲ್ಲಿ ಔತಣ ಕೂಟದಲ್ಲಿ ಭಾಗವಹಿಸುತ್ತಿದ್ದಾರೆ ಎಂಬುದು ವಿಶೇಷವಾಗಿದೆ ಎಂದು ಶ್ವೇತ ಭವನದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


