ಟ್ರಂಪ್-ಮೋದಿ ಭೇಟಿ ವೇಳೆ ವೀಸಾ ವಿಷಯ ಚರ್ಚೆಯಾಗಿಲ್ಲ: ವಿದೇಶಾಂಗ ಕಾರ್ಯದರ್ಶಿ
ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದ ವೇಳೆ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆ ವೇಳೆ ಹೆಚ್ 1 ಬಿ ವೀಸಾ ಬಗ್ಗೆಯೂ ಚರ್ಚೆ ನಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಈ ಬಗ್ಗೆ ಉಭಯ ನಾಯಕರ ನಡುವೆ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ.

Published On :
ವಾಷಿಂಗ್ ಟನ್: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದ ವೇಳೆ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆ ವೇಳೆ ಹೆಚ್ 1 ಬಿ ವೀಸಾ ಬಗ್ಗೆಯೂ ಚರ್ಚೆ ನಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಈ ಬಗ್ಗೆ ಉಭಯ ನಾಯಕರ ನಡುವೆ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ.
ಭಾರತೀಯ ಐಟಿ ಉದ್ಯೋಗಿಗಳು ಹೆಚ್ಚು ಬಳಸುವ ಹೆಚ್-1 ಬಿ ವೀಸಾ ನೀತಿಗಳನ್ನು ಟ್ರಂಪ್ ಸರ್ಕಾರ ಮರುಪರಿಶೀಲಿಸಿದ್ದು, ದ್ವಿಪಕ್ಷೀಯ ಮಾತುಕತೆ ವೇಳೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್, ಉಭಯ ನಾಯಕರು ಡಿಜಿಟಲ್ ಪಾಲುದಾರಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಆದರೆ ಹೆಚ್ 1 ಬಿ ವೀಸಾ ಕುರಿತು ಮಾತುಕತೆಯಾಗಲೀ ಪ್ರಸ್ತಾಪವಾಗಲಿ ಆಗಿಲ್ಲ ಎಂದು ಹೇಳಿದ್ದಾರೆ.
ಯಾವುದೇ ಹಿತಾಸಕ್ತಿಯ ವಿಷಯವನ್ನು ಗಂಭೀರವಾಗಿ ಪರಿಗಣಿಸಿದರೆ ಅದರ ಬಗ್ಗೆ ಖಂಡಿತವಾಗಿಯೂ ಗಮನ ಹರಿಸಲಾಗುತ್ತದೆ. ಆದ್ದರಿಂದ ಮಾತುಕತೆಯ ವೇಳೆ ವೀಸಾ ಅಂಶ ನಿರ್ದಿಷ್ಟವಾಗಿ ಚರ್ಚೆಯಾಗದಿದ್ದರೂ ಆ ಬಗ್ಗೆ ಎರಡು ಸರ್ಕಾರಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತವೆ ಎಂಬ ಅರ್ಥದಲ್ಲಿ ಜೈಶಂಕರ್ ಹೇಳಿಕೆ ನೀಡಿದ್ದಾರೆ.
ಅಮೆರಿಕ-ಭಾರತ ಬಾಂಧವ್ಯವನ್ನು ನಿರ್ಮಿಸಲು ಭಾರತೀಯ-ಅಮೆರಿಕನ್ ಸಮುದಾಯ ನಿರ್ವಹಿಸಿರುವ ಪ್ರಮುಖ ಪಾತ್ರವನ್ನು ಗುರುತಿಸಲಾಗುತ್ತದೆ. ಭಾರತೀಯ-ಅಮೆರಿಕನ್ನರು ಸಿಲಿಕಾನ್ ವ್ಯಾಲಿಯ ಟೆಕ್ನಾಲಜಿ ಕ್ರಾಂತಿಗೆ ಕೊಡುಗೆ ನೀಡಿ ಮುಂಚೂಣಿಯಲ್ಲಿದ್ದು, ಸಿಲಿಕಾನ್ ವ್ಯಾಲಿಯ ಸ್ಟಾರ್ಟ್ ಅಪ್ ಗಳಲ್ಲಿ ಶೇ.15 ರಷ್ಟು ಸ್ಟಾರ್ಟ್ ಅಪ್ ಗಳನ್ನು ಹೊಂದಿದ್ದಾರೆ. ಯಾವುದೆಕ್ಕೆ ಬೆಲೆ ನೀಡುತ್ತೇವೆಯೋ ಅದಕ್ಕೆ ಸಂಬಂಧಿಸಿದ ಹಿತಾಸಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಕೆಲಸ ನಡೆಯುತ್ತದೆ ಎಂದು ಜೈಶಂಕರ್ ಹೇಳಿದ್ದಾರೆ.
ವೀಸಾ ಅರ್ಜಿ ಹಾಗೂ ವೀಸಾ ನೀಡುವುದಕ್ಕೆ ಸಂಬಂಧಿಸಿದಂತೆ ತಕ್ಷಣಕ್ಕೆ ಯಾವುದೇ ಬದಲಾವಣೆಗಳಿಲ್ಲ. ಆದ್ದರಿಂದ ಈ ಹಂತದಲ್ಲೇ ವೀಸಾ ನಿಯಮಗಳ ಪರಿಶೀಲನೆಯ ಫಲಿತಾಂಶವನ್ನು ಅಂದಾಜಿಸುವುದು ಸಾಧ್ಯವಿಲ್ಲ ಎಂದಿದ್ದಾರೆ ಜೈಶಂಕರ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


