ಭಯೋತ್ಪಾದನೆ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ: 30 ಉಗ್ರರ ಹತ್ಯೆಗೈದ ಪಾಕ್, 9 ಸೈನಿಕರ ಸಾವು
ಭಯೋತ್ಪಾದನೆ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನ ಈ ವರೆಗೂ30 ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ...

Published On :
ಇಸ್ಲಾಮಾಬಾದ್: ಭಯೋತ್ಪಾದನೆ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನ ಈ ವರೆಗೂ30 ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
ಕಾರ್ಯಾಚರಣೆ ಕುರಿತಂತೆ ಮಾಹಿತಿ ನೀಡಿರುವ ಪಾಕಿಸ್ತಾನ ಸೇನಾಧಿಕಾರಿಗಳು, ಫೆಬ್ರವರಿ 22 ರಿಂದಲೂ ಸೇನಾ ಪಡೆ ಭಯೋತ್ಪಾದನೆ ವಿರುದ್ಧ ಕಾರ್ಯಾಚರಣೆ ನಡೆಸುತ್ತಲಿದೆ. ದೇಶದ ಹಲವೆಡೆ ಉಗ್ರ ಸಂಘಟನೆಗಳು ನಡೆಸಿದ ಸರಣಿ ದಾಳಿ ಬಳಿಕ ರಾಡ್-ಉಲ್-ಫಸಾದ್ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದೆವೆಂದು ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ಉಗ್ರರು ಯೋಜಿಸಲಾಗಿದ್ದ ಸಂಭಾವ್ಯ ದಾಳಿಗಳನ್ನು ಸೇನಾಪಡೆ ವಿಫಲವಾಗುವಂತೆ ಮಾಡಿದೆ. ಈ ವರೆಗೂ ನಡೆಸಲಾಗಿರುವ ಕಾರ್ಯಾಚರಣೆಯಲ್ಲಿ 9 ಯೋಧರು ಸಾವನ್ನಪ್ಪಿದ್ದಾರೆ, ಪ್ರಸ್ತುತ ಸೇನಾಪಡೆ ತನ್ನ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ಪಾಕಿಸ್ತಾನ ಆಂತರಿಕ ಸೇವಾ ಸಾರ್ವಜನಿಕ ಸಂಪರ್ಕ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


