ವಿದೇಶ

ಶ್ವೇತಭವನಕ್ಕೆ ಬಾಂಬ್ ಬೆದರಿಕೆ ಕರೆ; ಹೆಚ್ಚಿದ ಭದ್ರತೆ

ಅಮೆರಿಕದ ಶ್ವೇತಭವನಕ್ಕೆ ಬಾಂಬ್ ಬೆದರಿಕೆ ಕರೆಯೊಂದು ಬಂದಿದ್ದು, ಈ ಹಿನ್ನಲೆಯಲ್ಲಿ ಶ್ವೇತಭವನದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ...

ಶ್ವೇತಭವನಕ್ಕೆ ಬಾಂಬ್ ಬೆದರಿಕೆ ಕರೆ; ಹೆಚ್ಚಿದ ಭದ್ರತೆ
ಶ್ವೇತಭವನ
Published On :
ನ್ಯೂಯಾರ್ಕ್: ಅಮೆರಿಕದ ಶ್ವೇತಭವನಕ್ಕೆ ಬಾಂಬ್ ಬೆದರಿಕೆ ಕರೆಯೊಂದು ಬಂದಿದ್ದು, ಈ ಹಿನ್ನಲೆಯಲ್ಲಿ ಶ್ವೇತಭವನದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 
ಕಾರೊಂದರಲ್ಲಿ ಬಾಂಬ್ ಇರಿಸಲಾಗಿದ್ದು, ಶ್ವೇತಭವನವನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಶ್ವೇತಭವನದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ಭದ್ರತಾ ಸಿಬ್ಬಂದಿಗಳು ಸ್ಥಳದಲ್ಲಿ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ. 
ಶೋಧ ಕಾರ್ಯ ವೇಳೆ ಸ್ಥಳದಲ್ಲಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ವಾಹನವನ್ನು ಪರಿಶೀಲನೆ ನಡೆಸಿದ್ದಾರೆ. ವಾಹನದಲ್ಲಿ ಯಾವುದೇ ರೀತಿಯ ಸ್ಫೋಟ ವಸ್ತುಗಳಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಸ್ತುತ ವ್ಯಕ್ತಿಯೊಬ್ಬನನ್ನು ಬಂಧನಕ್ಕೊಳಪಡಿಸಿರವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. 
ಬೆದರಿಕೆ ಹಿನ್ನಲೆಯಲ್ಲಿ ಈಗಾಗಲೇ ಶ್ವೇತಭವನದ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಅಮೆರಿಕದ ಮಾಜಿ ಸೀಕ್ರೆಟ್ ಸರ್ವಿಸ್ ಏಜಂಟ್ ಡ್ಯಾನ್ ಬಾಂಗಿನೋ ಅವರು, ಅಮೆರಿಕದ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಅವರು ಶ್ವೇತ ಭವನದೊಳಗೆ ಸುರಕ್ಷಿತರಾಗಿಲ್ಲ. ಶ್ವೇತ ಭನನದ ಮೇಲೆ ಒಂದೊಮ್ಮೆ ಭಯೋತ್ಪಾದಕ ದಾಳಿ ನಡೆದಲ್ಲಿ ಸೀಕ್ರೆಟ್ ಸರ್ವಿಸ್ ದಳಕ್ಕೆ ಕೂಡ ಟ್ರಂಪ್ ಅವರನ್ನು ರಕ್ಷಿಸಲು ಸಾಧ್ಯವಾಗದು ಎಂದು ಹೇಳಿದ್ದರು. 

ಶ್ವೇತ ಭವನದ ಆವರಣ ಗೋಡೆ ಹಾರಿ ಒಳ ಪ್ರವೇಶಿಸಿದ ಒಬ್ಬ ವ್ಯಕ್ತಿಯನ್ನು ಮಟ್ಟ ಹಾಕಲು ಸೀಕ್ರೆಟ್ ಸರ್ವಿಸ್ ಗೆ ಸಾಧ್ಯವಾಗಿಲ್ಲ ಎಂದಾದರೆ, 40 ಭಯೋತ್ಪಾದಕರು ಶ್ವೇತ ಭವನದ ಮೇಲೆ ಮಾಡಿದರೆ ಅವರನ್ನು ಹೇಗೆ ನಿಭಾಯಿಸಲು ಸಾಧ್ಯ? ನನ್ನನ್ನು ನೀವು ನಂಬುವುದಾದರೆ ನಾನು ಹೇಳುತ್ತೇನೆ, ಭಯೋತ್ಪಾದಕರು ಈಗಾಗಲೇ ಆ ರೀತಿಯಲ್ಲಿ ಶ್ವೇತ ಭವನದ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆಂದು ತಿಳಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.