ವಿದೇಶ

ಪಾಕಿಸ್ತಾನ: ಜನಗಣತಿ ವೇಳೆ ಇಬ್ಬರು ಭಾರತೀಯರ ಬಂಧನ

ಜನಗಣತಿ ವೇಳೆ ಪಾಕಿಸ್ತಾನದ ಅಧಿಕಾರಿಗಳು ಇಬ್ಬರು ಭಾರತೀಯ ಪ್ರಜೆಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಪಾಕಿಸ್ತಾನ: ಜನಗಣತಿ ವೇಳೆ ಇಬ್ಬರು ಭಾರತೀಯರ ಬಂಧನ
ಸಂಗ್ರಹ ಚಿತ್ರ
Published On :
ಕರಾಚಿ: ಜನಗಣತಿ ವೇಳೆ ಪಾಕಿಸ್ತಾನದ ಅಧಿಕಾರಿಗಳು ಇಬ್ಬರು ಭಾರತೀಯ ಪ್ರಜೆಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 
ಬಂಧನಕ್ಕೊಳಗಾಗಿರುವ ಇಬ್ಬರೂ ಭಾರತೀಯರ ಬಳಿ ಯಾವುದ ಕಾನೂನಾತ್ಮಕ ದಾಖಲೆಗಳಿಲ್ಲ. ಅಕ್ರಮವಾಗಿ ದೇಶದಲ್ಲಿ ವಾಸವಿದ್ದಾರೆಂದು ಪಾಕಿಸ್ತಾನದ ಅಧಿಕಾರಿಗಳು ಆರೋಪಿಸಿದ್ದಾರೆ. 
ಸಿಂಧ್ ಪ್ರಾಂತೀಯ ಜನಗಣತಿ ಆಯುಕ್ತ ಅಬ್ದುಲ್ ಅಲೀಮ್ ಮೆಮನ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಮೊದಲ ಹಂತದಲ್ಲಿ ಸಿಂಧ್ ಪ್ರಾಂತ್ಯದ 8 ಜಿಲ್ಲೆಗಳಲ್ಲಿ ಜನಗಣತಿಯನ್ನು ನಡೆಸಲಾಗುತ್ತಿದೆ. ಜನಗಣತಿ ವೇಳೆ ಇಬ್ಬರು ಭಾರತೀಯ ಪ್ರಜೆಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಇಬ್ಬರೂ ಭಾರತೀಯರು ಕರಾಚಿಯಲ್ಲಿ ಅಕ್ರಮವಾಗಿ ನೆಲೆಯೂರಿರುವುದು ಕಂಡು ಬಂದಿತ್ತು. ಹೀಗಾಗಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. 
ಒಬ್ಬ ಭಾರತೀಯನನ್ನು ಕರಾಚಿಯ ಗುಲ್ಬರ್ಗ್ ಟೌನ್ ನಲ್ಲಿ ಬಂಧಿಸಲಾಗಿತ್ತು. ಈ ವೇಳೆ ಆತನ ಬಳಿಯಿದ್ದ ವೈಯಕ್ತಿಕ ಡೌರಿಯನ್ನು ವಶಕ್ಕೆ ಪಡೆಯಲಾಗಿತ್ತು. ಡೈರಿಯನ್ನು ಸಂಬಂಧ ಸಂಸ್ಥೆಗೆ ನೀಡಲಾಗಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.