ಪಾಕ್ ಗೆ ಮುಖಭಂಗ: ಕುಲಭೂಷಣ್ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ನ್ಯಾಯಾಲಯದ ತಡೆಯಾಜ್ಞೆ
ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ನ್ಯಾಯಾಲಯ ತಡೆಯಾಜ್ಞೆ ನೀಡಿದೆ...

Published On :
ನವದೆಹಲಿ: ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇದರಿಂದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ.
ವಿಯೆನ್ನಾ ಒಪ್ಪಂದ ಪ್ರಕಾರ ಜಾಧವ್ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದಕ್ಕೆ ಪಾಕ್ ಯಾವುದೇ ರೀತಿಯ ಅವಕಾಶ ನೀಡಿಲ್ಲ ಅಂತಾರಾಷ್ಟ್ರೀಯ ನ್ಯಾಯಾಲಯದಿಂದ ಮುಂದಿನ ಸೂಚನೆ ಬರುವವರೆಗೆ ಜಾಧವ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಕೋರ್ಟ್ ಸೂಚಿಸಿದೆ.
ಕುಲಭೂಷಣ್ ಜಾಧವ್ ಮೇಲೆ ಪಾಕಿಸ್ತಾನ ಬೇಹುಗಾರಿಕೆ ಆರೋಪ ಹೊರಿಸಿ ಮಿಲಿಟರಿ ಕೋರ್ಟ್ನಲ್ಲಿ ಗಲ್ಲುಶಿಕ್ಷೆ ವಿಧಿಸಿತ್ತು. ಭಾರತದ ಮೇಲ್ಮನವಿ ಪುರಸ್ಕರಿಸಿರುವ ನೆದರ್ಲ್ಯಾಂಡ್ಸ್ನ ಹೇಗ್ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಜಾಧವ್ ಗಲ್ಲು ಶಿಕ್ಷೆ ತಡೆಹಿಡಿಯುವಂತೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ಗೆ ಪತ್ರದ ಮೂಲಕ ಸೂಚಿಸಿದೆ.
ಜಾಧವ್ ಗಲ್ಲು ಶಿಕ್ಷೆಗೆ ತಡೆ ನೀಡಿರುವ ವಿಚಾರವನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಜಾಧವ್ ಅವರ ತಾಯಿಗೆ ತಿಳಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಜಾಧವ್ ಭೇಟಿಗೆ ಅವಕಾಶ ಕೋರಿ ರಾಜತಾಂತ್ರಿಕ ವಿಧಾನಗಳ ಮೂಲಕ 16 ಬಾರಿ ಯತ್ನಿಸಿತ್ತು. ಪಾಕಿಸ್ತಾನದಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಜಾಧವ್ ಭೇಟಿಗೆ ಅವಕಾಶ ಕೋರಿದ್ದರೂ, ಈ ಮನವಿಯನ್ನು ತಿರಸ್ಕರಿಸಿತ್ತು
ಜಾಧವ್ ವಿರುದ್ಧದ ಬೇಹುಗಾರಿಕೆ ಆರೋಪವನ್ನು ಅಲ್ಲಗಳೆದಿದ್ದ ಭಾರತ ಈ ಸಂಬಂಧ ಪಾಕಿಸ್ತಾನಕ್ಕೆ ಪತ್ರಮುಖೇನ ಆಕ್ಷೇಪ ವ್ಯಕ್ತಪಡಿಸಿತ್ತು. ಕುಲಭೂಷಣ್ ಅವರನ್ನು ಬೇಹುಗಾರಿಕೆ ಆರೋಪದ ಮೇಲೆ ಕಳೆದ ವರ್ಷ ಮಾರ್ಚ್ 6ರಂದು ಇರಾನ್ನಲ್ಲಿ ಬಂಧಿಸಲಾಗಿತ್ತು. ಬಳಿಕ ವಿಚಾರಣೆ ನಡೆಸಿದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು. ಜಾಧವ್ರ ತಾಯಿ ಅವಂತಿ ಜಾಧವ್ ಮರಣದಂಡನೆ ತಡೆ ಕೋರಿ ಕಳೆದ ತಿಂಗಳು ಪಾಕ್ನ ಉನ್ನತ ಕೋರ್ಟ್ಗೆ ಮನವಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistandeath sentencestayಮರಣ ದಂಡನೆInternational Court of JusticeKulbhushan Jadhavಕುಲಭೂಷಣ್ ಜಾಧವ್ಅಂತರರಾಷ್ಟ್ರೀಯ ನ್ಯಾಯಾಲಯತಡೆ. ಪಾಕಿಸ್ತಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


