ಬಾಂಗ್ಲಾದೇಶದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 4 ಉಗ್ರರು, ಓರ್ವ ಅಗ್ನಿಶಾಮಕ ಸಿಬ್ಬಂದಿ ಸಾವು
ಭಯೋತ್ಪಾದಕರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಪರಿಣಾಮ ನಾಲ್ವರು ಉಗ್ರರು ಮತ್ತು ಓರ್ವ ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿದ್ದಾರೆ...

Published On :
ಢಾಕಾ: ಭಯೋತ್ಪಾದಕರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು ಪರಿಣಾಮ ನಾಲ್ವರು ಉಗ್ರರು ಮತ್ತು ಓರ್ವ ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿದ್ದಾರೆ.
ಬಾಂಗ್ಲಾದೇಶದ ರಾಜ್ಶಾಹಿ ಜಿಲ್ಲೆಯಲ್ಲಿ ಪೊಲೀಸರು ಭದ್ರತಾ ತಪಾಸಣೆ ನಡೆಸುತ್ತಿದ್ದ ವೇಳೆ ಭಯೋತ್ಪಾದಕರು ತಮ್ಮನ್ನು ತಾವು ಸ್ಫೋಟಿಸಿಕೊಂಡಿದ್ದಾರೆ. ಈ ವೇಳೆ ನಾಲ್ವರು ಉಗ್ರರು ಮತ್ತು ಓರ್ವ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು ಈ ವೇಳೆ ಮನೆಯಲ್ಲಿ ಅಡಗಿ ಕುಳಿತಿದ್ದ ಮನೆಯೊಳಗೆ ಅಗ್ನಿಶಾಮಕ ಸಿಬ್ಬಂದಿ ನುಗ್ಗಿದ ಕೂಡಲೇ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ನಿಯೋ-ಜಮಾತುಲ್ ಮುಜಾಯಿದ್ದೀನ್ ಬಾಂಗ್ಲಾದೇಶ್(ಜೆಎಂಬಿ) ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಎಂದು ತಿಳಿದುಬಂದಿದೆ.
2016ರ ಜೂನ್ 1ರಂದು ಢಾಕಾ ಕೇಫೆ ಮೇಲೆ ಜಾಮಾತುಲ್ ಮುಜಾಯಿದ್ದೀನ್ ಬಾಂಗ್ಲಾದೇಶ್ ಉಗ್ರ ಸಂಘಟನೆಯ ಉಗ್ರರು ದಾಳಿ ಮಾಡಿದ್ದು 22 ಮಂದಿಯನ್ನು ಹತ್ಯೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


