ಜಾಧವ್ ಪ್ರಕರಣದಲ್ಲಿ ಭಾರತ ಇನ್ನೂ ಗೆದ್ದಿಲ್ಲ: ಪಾಕ್ ಪರ ವಕೀಲ ಖುರೇಷಿ
ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಸಂಪೂರ್ಣವಾಗಿ ಗೆದ್ದಿಲ್ಲ ಎಂದು ಪಾಕ್ ಪರ ವಕೀಲ ಖವರ್ ಖುರೇಷಿ ಹೇಳಿದ್ದಾರೆ.

Published On :
ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಸಂಪೂರ್ಣವಾಗಿ ಗೆದ್ದಿಲ್ಲ ಎಂದು ಪಾಕ್ ಪರ ವಕೀಲ ಖವರ್ ಖುರೇಷಿ ಹೇಳಿದ್ದಾರೆ.
ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ ಖವರ್ ಖುರೇಷಿ, ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಗೆದ್ದಿಲ್ಲ ಹಾಗೂ ಐಸಿಜೆ ಜಾಧವ್ ನ್ನು ಪ್ರಕರಣದಿಂದ ಖುಲಾಸೆಗೊಳಿಸುವುದಿಲ್ಲ ಎಂದು ದಿ ನೇಷನ್ ವರದಿ ಮಾಡಿದೆ. ಖುರೇಷಿ ಬದಲಾಗಿ ಪಾಕ್ ಅಟಾರ್ನಿ ಜನರಲ್ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಲಿದ್ದಾರೆ ಎಂಬ ವರದಿಗಳು ಪ್ರಕಟವಾಗಿತ್ತು.
ಕುಲಭೂಷಣ್ ಜಾಧವ್ ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿತ್ತು. ಈ ತೀರ್ಪನ್ನು ಭಾರತಕ್ಕೆ ದೊರೆತ ಮಹತ್ವದ ಮುನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನInternational Court of Justiceಅಂತಾರಾಷ್ಟ್ರೀಯ ನ್ಯಾಯಾಲಯKulbhushan Jadhavಕುಲಭೂಷಣ್ ಜಾಧವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


