ಬಾಗ್ದಾದ್'ನಲ್ಲಿ ಕಾರ್ ಬಾಂಬ್ ದಾಳಿ: 13 ಸಾವು, 24 ಜನರಿಗೆ ಗಾಯ
ಬಾಗ್ದಾದ್ ನಲ್ಲಿ ಉಗ್ರರು ಕಾರ್ ಬಾಂಬ್ ಸ್ಫೋಟಿಸಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿ 24ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ...

Published On :
ಬಾಗ್ದಾದ್: ಬಾಗ್ದಾದ್ ನಲ್ಲಿ ಉಗ್ರರು ಕಾರ್ ಬಾಂಬ್ ಸ್ಫೋಟಿಸಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿ 24ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.
ಕೇಂದ್ರೀಯ ಬಾಗ್ದಾದ್'ನ ಪ್ರತಿಷ್ಠಿತ ಐಸ್ ಕ್ರೀಮ್ ಅಂಗಡಿಯಲ್ಲಿ ಬಾಂಬ್ ಸ್ಫೋಟಿಸಲಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ದಾಳಿಯ ಹೊಣೆಯಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅ್ಯಂಡ್ ಇರಾನ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.
ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಉಪವಾಸ ದಿನ ಆರಂಭವಾಗಿದ್ದು. ಸೂರ್ಯ ಮುಳುಗಿದ ಹಿನ್ನಲೆಯಲ್ಲಿ ಬಹುತೇಕ ಮುಸ್ಲಿಂ ಕುಟುಂಬಗಳು ಊಟ ಸೇವಿಸಲು ಹೋಟೆಲ್ ಒಳ ಬಂದಿದ್ದರು. ಈ ವೇಳೆ ಉಗ್ರರು ಕಾರಿನಲ್ಲಿ ಬಾಂಬ್ ಇರಿಸಿ ಸ್ಫೋಟಿಸಿದ್ದಾರೆ.
ಸ್ಫೋಟ ಕುರಿತ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡತೊಡಗಿದೆ. ಬೀದಿಯಲ್ಲಿ ನಿಲ್ಲಿಸಲಿದ್ದ ಕಾರೊಂದು ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಈ ವೇಳೆ ಸ್ಥಳದಲ್ಲಿದ್ದ ಜನರು ಗಾಯಗೊಂಡು ರಕ್ತದ ಮಡುವಿನಲ್ಲಿ ದೃಶ್ಯಗಳು ವಿಡಿಯೋದಲ್ಲಿ ಕಂಡುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


