55 ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕಿಸ್ತಾನ
ಪಾಕಿಸ್ತಾನದ ಸಮುದ್ರ ಗಡಿಮೀರಿ ಮೀನುಗಾರಿಕ ನಡೆಸಿದ ಆರೋಪದ ಮೇರೆಗೆ 55 ಭಾರತೀಯ ಮೀನುಗಾರರನ್ನು ಪಾಕಿಸ್ತಾನದ ಅಧಿಕಾರಿಗಳು ಶುಕ್ರವಾರ ರಾತ್ರಿ ಬಂಧನಕ್ಕೊಳಪಡಿಸಿದ್ದಾರೆಂದು...

Published On :
ಇಸ್ಲಾಮಾಬಾದ್: ಪಾಕಿಸ್ತಾನದ ಸಮುದ್ರ ಗಡಿಮೀರಿ ಮೀನುಗಾರಿಕ ನಡೆಸಿದ ಆರೋಪದ ಮೇರೆಗೆ 55 ಭಾರತೀಯ ಮೀನುಗಾರರನ್ನು ಪಾಕಿಸ್ತಾನದ ಅಧಿಕಾರಿಗಳು ಶುಕ್ರವಾರ ರಾತ್ರಿ ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಅಂತರಾಷ್ಟ್ರೀಯ ಕಡಲ ಗಡಿ ರೇಖೆಯ (ಐಎಂಬಿಎಲ್) ಜಕಾವು ಬಳಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ 55 ಮಂದಿ ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಲಾಗಿದ್ದು, 9 ದೋಣಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿಕೆ ನೀಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದ ನೌಕಾದಳದ ಅಧಿಕಾರಿಗಳು 79 ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿತ್ತು. ಅಲ್ಲದೆ, 13 ದೋಣಿಗಳವನ್ನು ವಶಪಡಿಸಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


