11 ಸಿಬ್ಬಂದಿ ಪ್ರಯಾಣಿಸುತ್ತಿದ್ದ ಅಮೆರಿಕ ನೌಕಾಪಡೆ ವಿಮಾನ ಪತನ, 8 ಮಂದಿ ಪತ್ತೆ
11 ಸಿಬ್ಬಂದಿ ಪ್ರಯಾಣಿಸುತ್ತಿದ್ದ ಅಮೆರಿಕ ನೌಕಾಪಡೆಯ ವಿಮಾನವೊಂದು ಬುಧವಾರ ಪೆಸಿಫಿಕ್ ಸಮುದ್ರದಲ್ಲಿ ಪತನಗೊಂಡಿದೆ ಎಂದು ನೌಕಾಪಡೆ ತಿಳಿಸಿದೆ.

Published On :
ಟೋಕಿಯೋ: 11 ಸಿಬ್ಬಂದಿ ಪ್ರಯಾಣಿಸುತ್ತಿದ್ದ ಅಮೆರಿಕ ನೌಕಾಪಡೆಯ ವಿಮಾನವೊಂದು ಬುಧವಾರ ಪೆಸಿಫಿಕ್ ಸಮುದ್ರದಲ್ಲಿ ಪತನಗೊಂಡಿದೆ ಎಂದು ನೌಕಾಪಡೆ ತಿಳಿಸಿದೆ.
ದೈನಂದಿನ ಹಾರಾಟ ಮುಗಿಸಿ ಯುಎಸ್‌ಎಸ್ ರೊನಾಲ್ಡ್ ರೇಗನ್ ಏರ್‌ಕ್ರಾಫ್ಟ್ ಕ್ಯಾರಿಯರ್ (ವಿಮಾನ ಸಾಗಣೆ ನೌಕೆ)ಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಎಂಟು ಸಿಬ್ಬಂದಿಯನ್ನು ಪತ್ತೆ ಹಚ್ಚಲಾಗಿದೆ ಎಂದು ಜಪಾನ್ ರಕ್ಷಣಾ ಸಚಿವ ವರದಿಗಾರರಿಗೆ ತಿಳಿಸಿದ್ದಾರೆ. ಆದರೆ ಆ ಎಂಟು ಸಿಬ್ಬಂದಿಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಜಪಾನ್‌ನಲ್ಲಿರುವ ಅಮೆರಿಕದ ನೌಕಾನೆಲೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಪಾನ್ ಕಾಲಮಾನದ ಪ್ರಕಾರ ಮಧ್ಯಾಹ್ನ 2:45ರ ವೇಳೆಗೆ ಈ ದುರಂತ ಸಂಭವಿಸಿದೆ. ಆಗ ಏರ್‌ಕ್ರಾಫ್ಟ್ ಕ್ಯಾರಿಯರ್ ಹಡಗು ಫಿಲಿಪ್ಪೀನ್ಸ್ ಸಮುದ್ರದಲ್ಲಿತ್ತು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


