ಬಲೂಚಿಸ್ಥಾನದ ಸೂಫಿ ಮಂದಿರದಲ್ಲಿ ಸ್ಫೋಟ: 12 ಸಾವು, ಹಲವರಿಗೆ ಗಾಯ
ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿರುವ ಸೂಫಿ ಮಂದಿರದ ಮೇಲೆ ಆತ್ಮಹತ್ಯಾ ಭಯೋತ್ಪಾದಕ ದಾಳಿ ನಡೆದಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ, 8 ಜನರಿಗೆ ಗಾಯಗಳುಂಟಾಗಿದೆ.

Published On :
ಕರಾಚಿ: ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿರುವ ಸೂಫಿ ಮಂದಿರದ ಮೇಲೆ ಆತ್ಮಹತ್ಯಾ ಭಯೋತ್ಪಾದಕ ದಾಳಿ ನಡೆದಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ, 8 ಜನರಿಗೆ ಗಾಯಗಳುಂಟಾಗಿದೆ.
ಅಲ್ಲಿನ ಮಾಧ್ಯಮಗಳ ಪ್ರಕಾರ ದರ್ಗಾ ಫತೇಪುರ್ ಸೂಫಿ ಮಂದಿರದೊಳಗೆ ನುಗ್ಗಿದ ವ್ಯಕ್ತಿ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 12 ಜನರು ಹತ್ಯೆಯಾಗಿದ್ದಾರೆ ಎಂದು ಜಿಯೋ ಟಿವಿ ವರದಿ ಮಾಡಿದೆ. ಘಟನೆಯನ್ನು ಬಲೂಚಿಸ್ಥಾನ ಸರ್ಕಾರದ ವಕ್ತಾರ ಅನ್ವರುಲ್-ಹಕ್-ಕಕರ್ ದೃಢಪಡಿಸಿದ್ದು, ಸೂಫಿ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಜನ ಸಂದಣಿ ನೆರೆದಿದ್ದಾಗ ದಾಳಿ ಸಂಭವಿಸಿದ್ದು ಇಬ್ಬರು ಪೊಲೀಸರಿಗೂ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಿಬ್ಬಿ ಮತ್ತು ಡೇರಾ ಮುರಾದ್ ಜಮಾಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನಬಲೂಚಿಸ್ಥಾನsuicide blastBalochistan provinceSufi shrineಸೂಫಿ ಮಂದಿರಆತ್ಮಹತ್ಯಾ ಭಯೋತ್ಪಾದಕ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


