ಐಸಿಎಎನ್ ಗೆ 2017ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರ
ಪರಮಾಣು ಬಳಕೆ ವಿರೋಧಿ ಅಭಿಯಾನ ಸಂಘಟನೆ ದಿ ಇಂಟರ್ ನ್ಯಾಷನಲ್ ಕ್ಯಾಂಪೇನ್ ಟು ಅಬಾಲಿಶ್ ....

Published On :
ಒಸ್ಲೊ: ಪರಮಾಣು ವಿರೋಧಿ ಅಭಿಯಾನ ಸಂಘಟನೆಯಾದ ದಿ ಇಂಟರ್ ನ್ಯಾಷನಲ್ ಕ್ಯಾಂಪೇನ್ ಟು ಅಬಾಲಿಶ್ ನ್ಯೂಕ್ಲಿಯರ್ ವೆಪನ್(ಐಸಿಎಎನ್) ಗೆ 2017ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರ ಲಭಿಸಿದೆ.
ವಿಶ್ವಾದ್ಯಂತ ಸುಮಾರು 100 ವಿವಿಧ ದೇಶಗಳ ಸರ್ಕಾರೇತರ ಸಂಘಟನೆಗಳ ಒಕ್ಕೂಟ ಐಸಿಎಎನ್ ಆಗಿದೆ. ಅಂತಾರಾಷ್ಟ್ರೀಯ ಕಾನೂನಿನಡಿಯಲ್ಲಿ ಪರಮಾಣು ಶಸ್ತ್ರಾಸ್ತ್ರಗಳ ನಿಷೇಧವನ್ನು ಸಾಧಿಸಲು ನಾಗರಿಕ ಸಮಾಜದಲ್ಲಿ ಈ ಸಂಘಟನೆ ಪ್ರಮುಖ ಪಾತ್ರ ವಹಿಸುತ್ತದೆ.
ಪರಮಾಣು ಶಸ್ತ್ರಾಸ್ತ್ರಗಳ ಬಳಕೆಯಿಂದ ಮಾನವೀಯ ದುರಂತಗಳ ಪರಿಣಾಮ, ಅದರಿಂದಾಗುವ ಅನಾಹುತ ಮತ್ತು ಇಂತಹ ಶಸ್ತ್ರಾಸ್ತ್ರಗಳ ಬಳಕೆಯನ್ನು ನಿಷೇಧಿಸುವಲ್ಲಿ ಸಂಘಟನೆ ಅವಿರತವಾಗಿ ಪ್ರಯತ್ನಿಸುತ್ತಿದೆ. ಇದನ್ನು ಗುರುತಿಸಿ ನಾರ್ವೆ ಮೂಲದ ನೊಬೆಲ್ ಪ್ರಶಸ್ತಿ ಸಮಿತಿ ಸಂಘಟನೆಯನ್ನು ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಿಕೊಂಡಿದೆ.
ಪರಮಾಣು ಮುಕ್ತ ಜಗತ್ತನ್ನು ಸೃಷ್ಟಿ ಮಾಡುವುದು ನಮ್ಮ ಗುರಿಯಾಗಿದೆ ಎಂದು ನೊಬೆಲ್ ಸಮಿತಿ ಪ್ರಶಸ್ತಿ ಪ್ರಕಟಿಸುವ ಸಂದರ್ಭದಲ್ಲಿ ಹೇಳಿದೆ. ಹೊಸ ನಿರ್ದೇಶನ ಮತ್ತು ಹೊಸ ಚಟುವಟಿಕೆಗಳಿಗೆ ಪರಮಾಣುರಹಿತ ಜಗತ್ತು ನಾಂದಿ ಹಾಡಲು ಐಸಿಎಎನ್ ಸಂಘಟನೆ ಹಿಂದಿನಿಂದಲೂ ಪ್ರಯತ್ನಿಸಿಕೊಂಡು ಬಂದಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


