ವಿದೇಶ

ಭಯೋತ್ಪಾದನೆ ವಿರುದ್ಧ ಕಠಿಣ ಸಂದೇಶ ರವಾನಿಸಲು ಉನ್ನತ ಅಧಿಕಾರಿಗಳನ್ನು ಪಾಕ್ ಗೆ ಕಳಿಸಲಿರುವ ಟ್ರಂಪ್

ಪಾಕಿಸ್ತಾನ ಉಗ್ರರಿಗೆ ಸುರಕ್ಷಿತವಾಗಿರುವ ವಾತಾವರಣವನ್ನು ಕಲ್ಪಿಸುತ್ತಿರುವುದು ಅಮೆರಿಕದ ಸಹನೆಯನ್ನು ಪರೀಕ್ಷೆ ಮಾಡುತ್ತಿದೆ.

ಭಯೋತ್ಪಾದನೆ ವಿರುದ್ಧ ಕಠಿಣ ಸಂದೇಶ ರವಾನಿಸಲು ಉನ್ನತ ಅಧಿಕಾರಿಗಳನ್ನು ಪಾಕ್ ಗೆ ಕಳಿಸಲಿರುವ ಟ್ರಂಪ್
ಡೊನಾಲ್ಡ್ ಟ್ರಂಪ್
Published On :
ವಾಷಿಂಗ್ ಟನ್: ಪಾಕಿಸ್ತಾನ ಉಗ್ರರಿಗೆ ಸುರಕ್ಷಿತವಾಗಿರುವ ವಾತಾವರಣವನ್ನು ಕಲ್ಪಿಸುತ್ತಿರುವುದು ಅಮೆರಿಕದ ಸಹನೆಯನ್ನು ಪರೀಕ್ಷೆ ಮಾಡುತ್ತಿದ್ದು, ಡೊನಾಲ್ಡ್ ಟ್ರಂಪ್ ಆಡಳಿತ ಪಾಕ್ ನಡೆಗೆ ಕೆಂಡಾಮಂಡಲವಾಗಿದೆ. 
ಮಿಲಿಯನ್ ಡಾಲರ್ ಗಟ್ಟಲೆ ಹಣವನ್ನು ನೆರವಿನ ರೂಪದಲ್ಲಿ ನೀಡಲಾಗುತ್ತಿದ್ದರೂ ಪಾಕಿಸ್ತಾನ ಅದರ ಸದುಪಯೋಗ ಪಡೆಯದೇ ಹಣವನ್ನು ಉಗ್ರರಿಗೆ ನೆರವಾಗುವ ರೀತಿಯಲ್ಲಿ ಬಳಕೆ ಮಾಡುತ್ತಿದೆ ಎಂದು ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ಪಾಕಿಸ್ತಾನಕ್ಕೆ ಭಯೋತ್ಪಾದನೆಗೆ ಸಂಬಂಧಿಸಿದಂತೆ ಟ್ರಂಪ್ ಕಠಿಣ ಸಂದೇಶ ರವಾನೆ ಮಾಡಲು ಸಿದ್ಧತೆ ನಡೆಸಿದ್ದು, ತಮ್ಮ ಆಡಳಿತದ ಉನ್ನತ ಅಧಿಕಾರಿಗಳನ್ನು ಪಾಕಿಸ್ತಾನಕ್ಕೆ ಕಳಿಸಲಿದ್ದಾರೆ. 
ಈ ತಿಂಗಳಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಲಿರುವ ಅಮೆರಿಕ ವಿದೇಶಾಂಗ ಸಚಿವ ರೆಕ್ಸ್ ಟಿಲ್ಲರ್ಸನ್ ಭಯೋತ್ಪಾದನೆ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳದ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನೆ ಮಾಡಲಿದ್ದಾರೆ ಟಿಲ್ಲರ್ಸನ್ ಜೊತೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜಿಮ್ ಮಾಟೀಸ್ ಸಹ ಪಾಕ್ ಗೆ ತೆರಳಲಿದ್ದಾರೆ. 
ಪಾಕಿಸ್ತಾನ ತಾಲೀಬಾನ್ ಉಗ್ರರಿಗೆ ಸಹಕಾರ ನೀಡುವುದು, ಇಸ್ಲಾಮಿಕ್ ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಕಠಿಣ ಸಂದೇಶ ರವಾನೆ ಮಾಡುವುದಕ್ಕಾಗಿಯೇ ಟ್ರಂಪ್ ವಿದೇಶಾಂಗ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ಸನ್ ಹಾಗೂ ರಕ್ಷಣಾ ಕಾರ್ಯದರ್ಶಿ ಜಿಮ್ ಮಾಟೀಸ್ ಅವರನ್ನು ಕಳಿಸುತ್ತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.