ಪನಾಮ ಪ್ರಕರಣ: ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್, ಪುತ್ರಿ ವಿರುದ್ಧ ದೋಷಾರೋಪ
ಪನಾಮ ಪೇಪರ್ಸ್ ಲೀಕ್ ಹಗರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಭ್ರಷ್ಟಾಚಾರ ನಿಗ್ರಹ ಕೋರ್ಟ್ ಗುರುವಾರ ...

Published On :
ಲಾಹೋರ್: ಪನಾಮ ಪೇಪರ್ಸ್ ಲೀಕ್ ಹಗರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಭ್ರಷ್ಟಾಚಾರ ನಿಗ್ರಹ ಕೋರ್ಟ್ ಗುರುವಾರ ಪಾಕ್ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಪುತ್ರಿ ಮತ್ತು ಅಳಿಯನ ವಿರುದ್ಧ ದೋಷಾರೋಪ ಹೊರಿಸಲಾಗಿದೆ.
ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಉತ್ತರದಾಯಿತ್ವ ಸಂಸ್ಥೆ(ಎನ್‌ಎಬಿ) 67 ವರ್ಷದ ನವಾಜ್ ಷರೀಫ್, ಪುತ್ರಿ ಮರಿಯಂ ಹಾಗೂ ಅಳಿಯ ಮೊಹಮ್ಮದ್ ಸಪ್ದರ್ ವಿರುದ್ಧ ದೋಷಾರೋಪಪಟ್ಟಿಯನ್ನು ಸಲ್ಲಿಸಿದ್ದು, ಈ ಮೂವರು ಆರೋಪಿಗಳು ತಪ್ಪಿತಸ್ಥರು ಎಂದು ಆರೋಪಿಸಿರುವುದಾಗಿ ಡಾನ್ ವರದಿ ಮಾಡಿದೆ.
ಈ ಮಧ್ಯೆ, ದೋಷಾರೋಪ ದಾಖಲಿಸುವ ಪ್ರಕ್ರಿಯೆಯನ್ನು ಮಂದೂಡಬೇಕು ಎಂದು ನವಾಜ್ ಷರೀಫ್ ಅವರ ಅಳಿಯ ಕ್ಯಾಪ್ಟನ್ ಸಫ್ದರ್ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಪನಾಮಾ ಪೇಪರ್ ಲೀಕ್ ಮೂಲಕ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಅವರ ಕುಟುಂಬ ಸದಸ್ಯರು ವಿದೇಶಗಳಲ್ಲಿ ಹಲವಾರು ಖೊಟ್ಟಿ ಕಂಪೆನಿಗಳನ್ನು ಸ್ಥಾಪಿಸಿ ಕೋಟ್ಯಂತರ ರು. ಮೌಲ್ಯದ ಆಸ್ತಿ ಮಾಡಿಟ್ಟಿರುವುದು ಬೆಳಕಿಗೆ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Nawaz Sharifನವಾಜ್ ಷರೀಫ್Panama Papers caseanti-graft courtಪನಾಮ ಪೇಪರ್ಸ್ ಪ್ರಕರಣಭ್ರಷ್ಟಾಚಾರ ನಿಗ್ರಹ ಕೋರ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


