ನೇಪಾಳ: ಹೆದ್ದಾರಿಯಿಂದ ನದಿಗೆ ಉರುಳಿ ಬಿದ್ದ ಬಸ್, 14 ಮಂದಿ ಸಾವು
ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿಬಿದ್ದ ಪರಿಣಾಮ ಸುಮಾರು 14 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನೇಪಾಳದಲ್ಲಿ...

Published On :
ಕಠ್ಮಂಡು: ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿಬಿದ್ದ ಪರಿಣಾಮ ಸುಮಾರು 14 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನೇಪಾಳದಲ್ಲಿ ನಡೆದಿದೆ.
ಸುಮಾರು 50 ಮಂದಿ ಪ್ರಯಾಣಿಸುತ್ತಿದ್ದ ಬಸ್ಸು ನೇಪಾಳದ ಧಾಧಿಂಗ್ ಜಿಲ್ಲೆಯಲ್ಲಿ ತ್ರಿಶೂಲಿ ನದಿಗೆ ಉರುಳಿಬಿದ್ದಿದೆ ಎನ್ನಲಾಗಿದೆ. ಈ ಭೀಕರ ಅಪಘಾತದಲ್ಲಿ 15 ಮಂದಿ ಪ್ರಯಾಣಿಕರು ಗಾಯಗೊಂಡು ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಸುಮಾರು 80 ಅಡಿ ಮೇಲಿನಿಂದ ಶವಗಳನ್ನು ಹೊರಕ್ಕೆ ತೆಗೆಯಲಾಗುತ್ತಿದೆ.
ರಾಜ್‌ಬಿರಾಜ್‌ನಿಂದ ಕಾಠ್ಮಂಡು ಕಡೆಗೆ ಸಾಗುತ್ತಿದ್ದ ನತದೃಷ್ಟ ಬಸ್ಸು ಇಲ್ಲಿಂದ ಸುಮಾರು 80 ಕಿ.ಮೀ. ದೂರದ ಘಾಟ್‌ಬೇಸಿ ಬಾಂಗೆ ತಿರುವಿನಲ್ಲಿ ಹೆದ್ದಾರಿಯಿಂದ ಜಾರಿ ನದಿಗೆ ಉರುಳಿ ಬಿತ್ತು ಎಂದು ವರದಿಯಾಗಿದೆ. ಬಸ್ಸಿನಲ್ಲಿ ನಿಖರವಾಗಿ ಎಷ್ಟು ಪ್ರಯಾಣಿಕರು ಇದ್ದರು ಎಂಬುದು ತಿಳಿದು ಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


