ಕೆನ್ನೆತ್ ಜಸ್ಟರ್ ಭಾರತದ ರಾಯಭಾರಿಯಾಗಿ ನೇಮಕ ಮಾಡಿದ ಡೊನಾಲ್ಡ್ ಟ್ರಂಪ್
ಭಾರತ-ಅಮೆರಿಕ ಪರಮಾಣು ಒಪ್ಪಂದಕ್ಕೆ ಸಹಾಯ ಮಾಡಿದ್ದ ಕೆನ್ನೆತ್ ಐ ಜಸ್ಟರ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್....

Published On :
ನ್ಯೂಯಾರ್ಕ್: ಭಾರತ-ಅಮೆರಿಕ ಪರಮಾಣು ಒಪ್ಪಂದಕ್ಕೆ ಸಹಾಯ ಮಾಡಿದ್ದ ಕೆನ್ನೆತ್ ಐ ಜಸ್ಟರ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಅಮೆರಿಕ ರಾಯಭಾರಿಯಾಗಿ ನೇಮಕ ಮಾಡಿದ್ದಾರೆ.
ಕೆನ್ನೆತ್ ಜಸ್ಟರ್ ಅವರನ್ನು ಭಾರತದ ರಾಯಭಾರಿಯಾಗಿ ನೇಮಕ ಮಾಡಲು ಡೊನಾಲ್ಡ್ ಟ್ರಂಪ್ ಅವರು ಒಪ್ಪಿಗೆ ನೀಡಿದ್ದಾರೆ ಮತ್ತು ಅದಕ್ಕೆ ಸೆನೆಟ್ ಅನುಮೋದನೆ ನೀಡಿದೆ ಎಂದು ಶುಕ್ರವಾರ ಸಂಜೆ ವೈಟ್ ಹೌಸ್ ತಿಳಿಸಿದೆ.
62 ವರ್ಷದ ಜಸ್ಟರ್ ಭಾರತಕ್ಕೆ ಅಮೆರಿಕದ ರಾಯಭಾರಿ ಆಗಲಿದ್ದಾರೆ ಎಂದು ಕಳೆದ ಜೂನ್‍ನಲ್ಲೇ ಶ್ವೇತಭವನ ಹೇಳಿತ್ತು. ಆದರೆ ಟ್ರಂಪ್ ಹಾಗೂ ಸೆನೆ ಟ್ ಅನುಮೋದನೆಗೆ ಕಾಯಲಾಗಿತ್ತು.
ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಕೆನ್ನೆಥ್, ಜಾರ್ಜ್ ಡಬ್ಲ್ಯು ಬುಷ್ ಅವರ ಅಧಿಕಾರಾವಧಿಯಲ್ಲಿ ವಾಣಿಜ್ಯ ವಿಭಾಗದ ಉಪಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಪ್ರಸ್ತುತ, ಅಂತಾರಾಷ್ಟ್ರೀಯ ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಾಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಹಾಯಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


