ವಿದೇಶ

ಉತ್ತರ ಕೊರಿಯಾದಲ್ಲಿ 6ನೇ ಅಣ್ವಸ್ತ್ರ ಪರೀಕ್ಷೆ ಯಶಸ್ವಿ ಬೆನ್ನಲ್ಲೇ ಪ್ರಬಲ ಭೂಕಂಪ!

ಯುದ್ಧೋದಾಹದಲ್ಲಿರುವ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಇಂದು 6ನೇ ಬಾರಿಗೆ ಪರಮಾಣು ಪರೀಕ್ಷೆ ನಡೆಸಿದ್ದು ಇದರ ಬೆನ್ನಲ್ಲೇ ಪ್ರಬಲ ಭೂಕಂಪ...

ಉತ್ತರ ಕೊರಿಯಾದಲ್ಲಿ 6ನೇ ಅಣ್ವಸ್ತ್ರ ಪರೀಕ್ಷೆ ಯಶಸ್ವಿ ಬೆನ್ನಲ್ಲೇ ಪ್ರಬಲ ಭೂಕಂಪ!
ಕಿಮ್ ಜಾಂಗ್ ಉನ್
Published On :
ಸಿಯೋಲ್: ಯುದ್ಧೋದಾಹದಲ್ಲಿರುವ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಇಂದು 6ನೇ ಬಾರಿಗೆ ಪರಮಾಣು ಪರೀಕ್ಷೆ ನಡೆಸಿದ್ದು ಇದರ ಬೆನ್ನಲ್ಲೇ ಪ್ರಬಲ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.  
ಕಿಮ್ ಜಾಂಗ್ ಉನ್ ಹೈಡ್ರೋಜನ್ ಬಾಂಬನ್ನು ಖಂಡಾಂತರ್ಗಾಮಿ ಕ್ಷಿಪಣಿಗೆ ಅಳವಡಿಸಿರುವ ಕುರಿತು ಹೇಳಿರುವ ಬೆನ್ನಲ್ಲೇ ಪರೀಕ್ಷೆ ನಡೆಸಲಾಗಿದ್ದು ಅದು ಭೂಕಂಪನಕ್ಕೆ ಕಾರಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನು ಅಣ್ವಸ್ತ್ರ ಪರೀಕ್ಷೆ ಆಂತಕದ ಬೆನ್ನಲ್ಲೇ ವೈರಿ ರಾಷ್ಟ್ರ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ ಇನ್ ರಾಷ್ಟ್ರೀಯ ಭದ್ರತಾ ಸಲಹಾ ಸಮಿತಿಯ ತುರ್ತು ಸಭೆ ಕರೆದಿದ್ದಾರೆ. 
ಉತ್ತರ ಕೊರಿಯಾದ ಸಾಂಗ್ ಜಿ ಬಾಗೇಮ್ ನ ಈಶಾನ್ಯ ಪ್ರಾಂತ್ಯದಲ್ಲಿ 5.1 ತೀವ್ರತೆಯ ಕೃತಕ ಭೂಕಂಪನ ಸಂಭವಿಸಿದೆ ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ. ಭೂಕಂಪನ ವಾದ ಬಳಿಕ ದಕ್ಷಿಣ ಕೊರಿಯಾದ ಸೇನೆ ಹೇಳಿಕೆ ನೀಡಿದ್ದು 5.6 ತೀವ್ರತೆಯ ಕೃತಕ ಭೂಕಂಪವನ್ನು ಉತ್ತರ ಕೊರಿಯಾ ಸೃಷ್ಟಿ ಮಾಡಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.