ಶಾಂತಿ ಸ್ಥಾಪನೆಗೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಸಹಕಾರ ಆಗತ್ಯ: ಪ್ರಧಾನಿ ಮೋದಿ
ಶಾಂತಿ ಸ್ಥಾಪನೆಗಾಗಿ ಬ್ರಿಕ್ಸ್ ರಾಷ್ಟ್ರಗಳ ನಡುವೆ ಸಹಕಾರ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Published On :
ಬೀಜಿಂಗ್: ಶಾಂತಿ ಸ್ಥಾಪನೆಗಾಗಿ ಬ್ರಿಕ್ಸ್ ರಾಷ್ಟ್ರಗಳ ನಡುವೆ ಸಹಕಾರ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಚೀನಾದ ಕ್ಸಿಯಾಮೆನ್ ನಲ್ಲಿ ನಡೆಯುತ್ತಿರುವ ಬ್ರಿಕ್ ರಾಷ್ಟ್ರಗಳ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, "ಶಾಂತಿ ಸ್ಥಾಪನೆ ಮತ್ತು ಅಭಿವೃದ್ಧಿಗೆ ಪರಸ್ಪರ ಸಹಕಾರ ಮುಖ್ಯ. ಬಡತನ ವಿರುದ್ಧದ ಹೋರಾಟದಲ್ಲಿ ತಂತ್ರಜ್ಞಾನ ಬಳಸಬೇಕಿದೆ. ಬ್ರಿಕ್ಸ್ ರಾಷ್ಟ್ರಗಳಲ್ಲಿ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದಿದ್ದಾರೆ. ಅಂತೆಯೇ ಚೀನಾದ ವಿರೋಧದ ಹೊರತಾಗಿಯೂ ಪ್ರಧಾನಿ ಮೋದಿ ಭಯೋತ್ಪಾದನೆ ವಿರುದ್ಧ ಪಾಕಿಸ್ತಾನದ ವಿರುದ್ಧ ಪರೋಕ್ಷ ಟೀಕೆ ಮಾಡಿ, ಭಯೋತ್ಪಾದನೆ ನಿಗ್ರಹಕ್ಕೆ ವಿಶ್ವ ಸಮುದಾಯ ಒಗ್ಗೂಡಿ ಕೆಲಸ ಮಾಡಬೇಕಿದ್ದು, ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಸೌರಶಕ್ತಿಯನ್ನು ಬಲಪಡಿಸುವ ದಿಶೆಯಲ್ಲಿ ಐಎಸ್‌ಎ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯ ಇದೆ ಎಂದು ಹೇಳಿದರು.
ಬ್ರಿಕ್ಸ್‌ನ ಪಾಲುದಾರಿಕೆ ಮತ್ತು ಹೊಸ ಆಲೋಚನೆಗಳು ಪ್ರಗತಿಯ ಸಾಧನವಾಗಲಿವೆ ಎಂದ ಪ್ರಧಾನಿ ಮೋದಿ, ಅಂತೆಯೇ ಜನರಿಗೆ ಉತ್ತಮ ಆರೋಗ್ಯ, ಶೌಚ ವ್ಯವಸ್ಥೆ, ಕೌಶಲಾಭಿವೃದ್ಧಿ, ಆಹಾರ ಭದ್ರತೆ, ಲಿಂಗ ಸಮಾನತೆ, ಇಂಧನ ಮತ್ತು ಶಿಕ್ಷಣ ಕುರಿತಾಗಿಯೂ ನಾವು ಹೋರಾಡುತ್ತಿದ್ದೇವೆ' ಎಂದು ಹೇಳಿದರು. "ಕಪ್ಪು ಹಣ ವಿರುದ್ಧದ ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟಕ್ಕೆ ಸಹಕಾರ ಅಗತ್ಯ. ದೇಶದ ಯುವಜನ ನಮ್ಮ ಶಕ್ತಿ. ಸೌರಶಕ್ತಿ ಬಳಕೆ, ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ. ಬಡತನ ನಿರ್ಮೂಲನೆಗೆ ಒತ್ತು ನೀಡಿದ್ದು, ಆರೋಗ್ಯ, ನೈರ್ಮಲ್ಯ, ಕೌಶಲ, ಆಹಾರ ಭದ್ರತೆ, ಲಿಂಗ ಸಮಾನತೆ, ಇಂಧನ, ಶಿಕ್ಷಣ ಕ್ಷೇತ್ರಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?