ನಾವೆಲ್ಲರೂ ಒಗ್ಗೂಡಿ ಹಸಿರು ವಿಶ್ವವನ್ನು ನಿರ್ಮಾಣ ಮಾಡಬೇಕಿದೆ: ಪ್ರಧಾನಿ ಮೋದಿ
ಚೀನಾದ ಕ್ಸಿಯಾಮೆನ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮಾವೇಶದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ, ಹಸಿರುವ ವಿಶ್ವದ ನಿರ್ಮಾಣದ ಕುರಿತು ಮಾತನಾಡಿದ್ದು, ಇದಕ್ಕಾಗಿ ಬ್ರಿಕ್ಸ್ ರಾಷ್ಟ್ರಗಳು ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

Published On :
ಕ್ಸಿಯಾಮೆನ್: ಚೀನಾದ ಕ್ಸಿಯಾಮೆನ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮಾವೇಶದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ, ಹಸಿರುವ ವಿಶ್ವದ ನಿರ್ಮಾಣದ ಕುರಿತು ಮಾತನಾಡಿದ್ದು, ಇದಕ್ಕಾಗಿ ಬ್ರಿಕ್ಸ್ ರಾಷ್ಟ್ರಗಳು ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.
ರಿಕ್ಸ್ ಸಮಾವೇಶದಲ್ಲಿ ಇಂದು ಉದಯೋನ್ಮುಖ ಮಾರುಕಟ್ಟೆ ಮತ್ತು ಅಭಿವೃದ್ಧಿಶೀಲ ರಾಷ್ಟ್ರ ವಿಚಾರದ ಕುರಿತ ನಡೆದ ಮಹತ್ವದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದ್ದು, ಮುಂದಿನ ಪೀಳಿಗೆಗೆ ಹಸಿರು ವಿಶ್ವವನ್ನು ನಿರ್ಮಾಣ ಮಾಡಬೇಕಿದೆ. ಇದು ಹವಾಮಾನ ಬದಲಾವಣೆಯ ಅಪಾಯವನ್ನು ತಗ್ಗಿಸುತ್ತದೆ. ಅಂತೆಯೆ ನಮ್ಮ ಅಭಿವೃದ್ಧಿ ಅಜೆಂಡಾ "ಸಬ್ ಕಾ ಸಾಥ್ ಸಬ್ ಕಾ ವಿಕಾಸ್" ಎಂಬ ಘೋಷ ವ್ಯಾಕ್ಯದ ಮೇಲೆ ನಿಂತಿರಬೇಕು ಎಂದು ಹೇಳಿದರು.
ಎಲ್ಲ ರಾಷ್ಟ್ರಗಳೂ ಕೂಡಿ ಬಾಳುವ ಮತ್ತು ಅತ್ಯಂತ ಕಡು ಬಡವ ಕೂಡ ಆರ್ಥಿಕ ಮುಖ್ಯವಾಹಿನಿಗೆ ಬರುವಂತಹ ಅಂತರ್ಗತ ಜಗತ್ತಿನ ಅವಶ್ಯಕತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದರು. ಅಂತೆಯೇ ದಕ್ಷಿಣ ಆಫ್ರಿಕಾ ದೇಶದೊಂದಿಗಿನ ಭಾರತದ ಸಹಭಾಗಿತ್ವವನ್ನು ಕೊಂಡಾಡಿದ ಪ್ರಧಾನಿ ಮೋದಿ, ಅಂತಾರಾಷ್ಟ್ರೀಯ ಸೋಲಾರ್ ಒಕ್ಕೂಟದ ಬಗ್ಗೆ ಮಾತನಾಡಿದರು. ಅಂತೆಯೇ ಭಯೋತ್ಪಾದನೆ ನಿಗ್ರಹಕ್ಕೆ ಸಂಘಟಿತ ಕ್ರಮ ಮತ್ತು ಸಹಕಾರ ಅತ್ಯಗತ್ಯ ಎಂದ ಮೋದಿ, ಸೈಬರ್ ಭದ್ರತೆ ಹಾಗೂ ದುರಂತ ನಿರ್ವಹಣೆಯಲ್ಲಿ ಸಹಕಾರ ಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


