ಮೆಕ್ಸಿಕೋದಲ್ಲಿ ಭಾರಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 8.0ರಷ್ಚು ತೀವ್ರತೆ ದಾಖಲು
ಕೇಂದ್ರೀಯ ಅಮೆರಿಕದ ಮೆಕ್ಸಿಕೋ ನಗರದಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 8.0ರಷ್ಟು ತೀವ್ರ ದಾಖಲಾಗಿದೆ.

Published On :
ಮೆಕ್ಸಿಕೋ: ಕೇಂದ್ರೀಯ ಅಮೆರಿಕದ ಮೆಕ್ಸಿಕೋ ನಗರದಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 8.0ರಷ್ಟು ತೀವ್ರ ದಾಖಲಾಗಿದೆ.
ಮೆಕ್ಸಿಕೋದ ಪಿಜಿಜಪಾನ್ ಪ್ರದೇಶದ 123 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಭೂಕಂಪನದ ತೀವ್ರತೆಗೆ ಕೇಂದ್ರೀಯ ಮೆಕ್ಸಿಕೋ ನಗರದ ಹಲವು ಕಟ್ಟಡಗಳು ಬಿರುಕು ಬಿಟ್ಟಿವೆ ಎಂದು ಹೇಳಲಾಗಿದೆ. ಅಂತೆಯೇ ಭೂಕಂಪನದಿಂದಾಗಿ ಸಮುದ್ರದಲ್ಲಿ ಸುನಾಮಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಅಮೆರಿಕ ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಹೀಗಾಗಿ ತೀರ ಪ್ರದೇಶದಲ್ಲಿರುವ ಜನ ಕೂಡಲೇ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇನ್ನು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಕೇಂದ್ರ ಅಭಿಪ್ರಾಯಪಟ್ಟಿರುವಂತೆ 1985ರ ಬಳಿಕ ಮೆಕ್ಸಿಕೋದಲ್ಲಿ ಸಂಭವಿಸಿದ ಪ್ರಬಲ ಭೂಕಂಪನ ಇದಾಗಿದೆ ಎಂದು ಹೇಳಿದೆ.
ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಮೆಕ್ಸಿಕೋ ನಗರದ ವಾಸಿಗಳು ಭಯಭೀತರಾಗಿ ಹೊರಗೆ ಓಡಿ ಬರುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಪ್ರಸ್ತುತ ಭೂಕಂಪನದಿಂದಾಗಿ ಸಾವುನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ.
ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಮೆಕ್ಸಿಕೋ ನಗರದ ವಾಸಿಗಳು ಭಯಭೀತರಾಗಿ ಹೊರಗೆ ಓಡಿ ಬರುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಪ್ರಸ್ತುತ ಭೂಕಂಪನದಿಂದಾಗಿ ಸಾವುನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


