ಪಾಕಿಸ್ತಾನ ಉಗ್ರ ಚಟುವಟಿಕೆಗಳ ಕೇಂದ್ರ: ವಿಶ್ವಸಂಸ್ಥೆಯಲ್ಲಿ ಆಫ್ಘಾನಿಸ್ತಾನ
ಪಾಕಿಸ್ತಾನ ಉಗ್ರ ಚಟುವಟಿಕೆಗಳ ಕೇಂದ್ರಸ್ಥಾನವಾಗಿದ್ದು, ತನ್ನ ನೆಲದ ಉಗ್ರರನ್ನು ಸದೆಬಡಿಯಲಾಗದೇ ಇದೀಗ ಇತರೆ ರಾಷ್ಟ್ರಗಳ ವಿರುದ್ಧ ಆರೋಪ ಮಾಡುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಆಫ್ಘಾನಿಸ್ತಾನ ಕಿಡಿಕಾರಿದೆ.

Published On :
ನ್ಯೂಯಾರ್ಕ್: ಪಾಕಿಸ್ತಾನ ಉಗ್ರ ಚಟುವಟಿಕೆಗಳ ಕೇಂದ್ರಸ್ಥಾನವಾಗಿದ್ದು, ತನ್ನ ನೆಲದ ಉಗ್ರರನ್ನು ಸದೆಬಡಿಯಲಾಗದೇ ಇದೀಗ ಇತರೆ ರಾಷ್ಟ್ರಗಳ ವಿರುದ್ಧ ಆರೋಪ ಮಾಡುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಆಫ್ಘಾನಿಸ್ತಾನ ಕಿಡಿಕಾರಿದೆ.
ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ರೈಟು ಟು ರಿಪ್ಲೈ (ಪ್ರತಿಕ್ರಿಯೆ ನೀಡುವ ಹಕ್ಕು) ಸಂದರ್ಭದಲ್ಲಿ ಮಾತನಾಡಿದ ಆಪ್ಘಾನಿಸ್ತಾನ ಪ್ರತಿನಿಧಿಗಳು ಪಾಕಿಸ್ತಾನದ ವಿರುದ್ಧ ತೀವ್ರ ಕಿಡಿಕಾರಿದರು. ಪಾಕಿಸ್ತಾನ ತನ್ನ ನೆಲದಲ್ಲಿ ಸಕ್ರಿಯವಾಗಿರುವ ವಿವಿಧ ಭಯೋತ್ಪಾದಕ ಗುಂಪುಗಳು ಮತ್ತು ಅವುಗಳ ಆಶ್ರಯದಾತರ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲು ವಿಫಲವಾಗಿದೆ. ಇದೀಗ ತನ್ನ ತಪ್ಪುಗಳನ್ನು ಮುಚ್ಚಿ ಹಾಕಲು ಇತರೆ ರಾಷ್ಟ್ರಗಳ ಮೇಲೆ ಗೂಬೆ ಕೂರಿಸುವ ಮೂಲಕ ಅಂತಾರಾಷ್ಟ್ರೀಯ ಸಮುದಾಯದ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದೆ.
ಈ ಹಿಂದೆ ವಿಶ್ವಸಂಸ್ಥೆಯಲ್ಲಿ ಮಾತನಾಡಿದ್ದ ಪಾಕಿಸ್ತಾನದ ಪ್ರಧಾನಿ ಶಾಹಿದ್ ಖಾನ್ ಅಬ್ಬಾಸಿ ಅವರು, ಪಾಕಿಸ್ತಾನದಲ್ಲಿ ತಾಲಿಬಾನ್ ಗೆ ಸುರಕ್ಷಿತ ಆಶ್ರಯತಾಣಗಳಿಲ್ಲ, ಅವುಗಳು ಅಫ್ಘಾನಿಸ್ತಾನದಲ್ಲೇ ಇವೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಆಫ್ಘನ್ ಪ್ರತಿನಿಧಿಗಳು ತಮ್ಮ ಉತ್ತರಿಸುವ ತನ್ನ ಹಕ್ಕನ್ನು ಚಲಾಯಿಸಿ, ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ನೆಲೆ ಸಿಕ್ಕಿರುವುದು ಆ ದೇಶದಲ್ಲಿ ಮತ್ತು ವಲಯದಲ್ಲಿ ಉಂಟಾಗಿರುವ ಅಭದ್ರತೆಯ ಪ್ರಧಾನ ಮೂಲ ಎನ್ನುವುದು ಸ್ಪಷ್ಟ. ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ಸುರಕ್ಷಿತ ಆಶ್ರಯ ತಾಣಗಳಿವೆ ಎಂಬುದಾಗಿ ಸದಸ್ಯ ದೇಶವೊಂದು ಹೇಳಿಕೊಂಡಿರುವುದು ಸರಿಯಲ್ಲ ಎಂದು ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಅಫ್ಘನ್ ಪ್ರತಿನಿಧಿ ಹೇಳಿದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New YorkPakistanಪಾಕಿಸ್ತಾನTerrorismಭಯೋತ್ಪಾದನೆAfghanistanವಿಶ್ವಸಂಸ್ಥೆUnited Nationsನ್ಯೂಯಾರ್ಕ್ಅಫ್ಘಾನಿಸ್ತಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.