ಮುಂಬೈ ದಾಳಿ ರೂವಾರಿ ಹಫೀಜ್ ಸಯೀದ್ ಗೃಹಬಂಧನ ಅವಧಿ ಮತ್ತೆ ಒಂದು ತಿಂಗಳು ವಿಸ್ತರಣೆ
ಮುಂಬಯಿ ಭಯೋತ್ಪಾದನಾ ದಾಳಿಯ ರೂವಾರಿ ಹಫೀಜ್ ಸಯೀದ್ ನ ಗೃಹ ಬಂಧನವನ್ನು ಪಾಕಿಸ್ತಾನ ಮತ್ತೊಂದು ತಿಂಗಳು ವಿಸ್ತರಿಸಿದೆ.

Published On :
ಲಾಹೋರ್: ಮುಂಬಯಿ ಭಯೋತ್ಪಾದನಾ ದಾಳಿಯ ರೂವಾರಿ ಹಫೀಜ್ ಸಯೀದ್ ನ ಗೃಹ ಬಂಧನವನ್ನು ಪಾಕಿಸ್ತಾನ ಮತ್ತೊಂದು ತಿಂಗಳು ವಿಸ್ತರಿಸಿದೆ. ಅವರ ಚಟುವಟಿಕೆಗಳು ದೇಶದಲ್ಲಿ ಶಾಂತಿ ಕದಡುವಿಕೆಗೆ ರಹದಾರಿ ಆಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತದ ಅಧಿಕಾರಿಗಳು ತಿಳಿಸಿದ್ದಾರೆ.
ಜಮಾತ್-ಉದ್-ದವಾ (ಜೆಯುಡಿ) ಮುಖ್ಯಸ್ಥ ಸಯೀದ್ ಅವರು ಈ ವರ್ಷದ ಜನವರಿ 31 ರಿಂದ ಗೃಹಬಂಧನದಲ್ಲಿದ್ದಾನೆ.
ಸಯೀದ್ ಮತ್ತು ಅವರ ನಾಲ್ವರು ಸಹಾಯಕರಾದ ಅಬ್ದುಲ್ಲಾ ಉಬೈದ್, ಮಲಿಕ್ ಜಾಫರ್ ಇಕ್ಬಾಲ್, ಅಬ್ದುಲ್ ರೆಹಮಾನ್ ಅಬಿದ್ ಮತ್ತು ಖಝಿ ಕಾಶಿಫ್ ಹುಸೇನ್ ಅವರ ಗೃಹ ಬಂಧನವನ್ನು ಸೆಪ್ಟಂಬರ್ 25 ರಿಂದ ಜಾರಿಗೆ ಬರುವಂತೆ ಮತ್ತೆ 30 ದಿನಗಳಿಗೆ ವಿಸ್ತರಿಸಿ ಪಂಜಾಬ್ ಗೃಹ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ. ಇದಕ್ಕೂ ಮುನ್ನ ಜುಲೈ 28 ರಂದು ಜೆಯುಡಿ ಮುಖ್ಯಸ್ಥನ ಬಂಧನ ವಿಸ್ತರಿಸಿ ಆದೇಶ ನೀಡಲಾಗಿತ್ತು.
ಈವರ್ಷ ಜ. 31ರಂದು, ಸಯೀದ್ ಮತ್ತು ಇತರ ನಾಲ್ವರನ್ನು ಭಯೋತ್ಪಾದನಾ ವಿರೋಧಿ ಕಾಯ್ದೆ 1997 ರ ಅಡಿಯಲ್ಲಿ 90 ದಿನಗಳ ಕಾಲ ಗೃಹಬಂಧನದಲ್ಲಿ ಇರಿಸಿ ಪಂಜಾಬ್ ಸರ್ಕಾರ ಆದೇಶಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನHafiz Saeedಹಫೀಜ್ ಸಯೀದ್Mumbai terror attackಮುಂಬೈ ಭಯೋತ್ಪಾದನಾ ದಾಳಿhouse arrest of Hafiz Saeedಹಫೀಜ್ ಸಯೀದ್ ಗೃಹ ಬಂಧನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


