ಉತ್ತರ ಕೊರಿಯಾ ಮೇಲೆ ಸೇನಾ ಕಾರ್ಯಾಚರಣೆ ನಡೆಸಲು ಅಮೆರಿಕ ಸಿದ್ಧವಾಗಿದೆ: ಡೊನಾಲ್ಡ್ ಟ್ರಂಪ್
ಉದ್ಧಟತನ ಪ್ರದರ್ಶಿಸುತ್ತಿರುವ ಉತ್ತರ ಕೊರಿಯಾ ಮೇಲೆ ಸೇನಾ ಕಾರ್ಯಾಚರಣೆ ನಡೆಸಲು ಅಮೆರಿಕ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬುಧವಾರ ಹೇಳಿದ್ದಾರೆ...

Published On :
ವಾಷಿಂಗ್ಟನ್: ಉದ್ಧಟತನ ಪ್ರದರ್ಶಿಸುತ್ತಿರುವ ಉತ್ತರ ಕೊರಿಯಾ ಮೇಲೆ ಸೇನಾ ಕಾರ್ಯಾಚರಣೆ ನಡೆಸಲು ಅಮೆರಿಕ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬುಧವಾರ ಹೇಳಿದ್ದಾರೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಉತ್ತರ ಕೊರಿಯಾ ನಮ್ಮ ವಾಯುಸೀಮೆಯೊಳಕ್ಕೆ ಬಾರದಿದ್ದರೂ ಅಮೆರಿಕದ ಬಾಂಬರ್ ವಿಮಾನಗಳನ್ನು ಹೊಡೆದುರುಳಿಸುವ ಹಕ್ಕು ನಮಗೆ ಲಭಿಸಿದೆ ಎಂದು ಹೇಳಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಉತ್ತರ ಕೊರಿಯಾ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುವುದು ನಮ್ಮ ಎರಡನೇ ಆಯ್ಕೆಯಾಗಿದೆ. ಸೇನಾ ಕಾರ್ಯಾಚರಣೆಗೆ ಅಮೆರಿಕ ಸಂಪೂರ್ಣ ಸಿದ್ಧವಿದ್ದು, ಒಂದು ವೇಳೆ ನಾವು ಸೇನಾ ಕಾರ್ಯಾಚರಣೆ ಕೈಗೊಂಡಿದ್ದೇ ಆದರೆ, ಅದು ಉತ್ತರಕೊರಿಯಾಗೆ ವಿನಾಶಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ವರ್ತನೆ ಬಹಳ ಕೆಟ್ಟದಾಗಿದೆ. ಈ ಹಿಂದೆಂದೂ ನಡೆಯದ ಪರಿಸ್ಥಿತಿಗಳನ್ನು, ಮಾತುಗಳನ್ನಾಡುತ್ತಿದ್ದಾರೆ. ಉತ್ತರ ಕೊರಿಯಾ ನಾಯಕನ ನಡೆಗೆ ಶೀಘ್ರದಲ್ಲಿಯೇ ಸರಿಯಾದ ಉತ್ತರವನ್ನು ನೀಡುತ್ತೇವೆ. ಪ್ರಸ್ತುತ ಉತ್ತರ ಕೊರಿಯಾ ನೀಡಿರುವ ಹೇಳಿಕೆ ನಾನು ಅಧಿಕೃತ ಹೇಳಿಕೆಯನ್ನು ನೀಡುತ್ತಿಲ್ಲ. ಇದು ಕೇವಲ ಹೇಳಿಕೆಯಷ್ಟೇ. ಉತ್ತರ ಕೊರಿಯಾದ ಈ ರೀತಿಯ ನಡೆಯನ್ನು 25, 20, 15, 10 ಮತ್ತು 5 ವರ್ಷಗಳ ಹಿಂದಿನಿಂದಲೂ ನಾವು ಎದುರಿಸುತ್ತಿದ್ದೇವೆ. ಈಗಲೂ ಅಂತಹ ಪರಿಸ್ಥಿತಿಯನ್ನು ನಾವು ಸುಲಭವಾಗಿ ಎದುರಿಸಬಲ್ಲೆವು ಎಂದು ತಿಳಿಸಿದ್ದಾರೆ.
ಉತ್ತರ ಕೊರಿಯಾದ ಪರಮಾಣು ಶಕ್ತಿ ಶಸ್ತ್ರಾಸ್ತ್ರಗಳು ಹಾಗೂ ಅವುಗಳ ಅಭಿವೃದ್ಧಿ ಇಡೀ ವಿಶ್ವಕ್ಕೆ ಬೆದರಿಕೆಯನ್ನು ಒಡ್ಡಿದೆ. ಇದರಿಂದ ವಿಶ್ವಕ್ಕೆ ಊಹಿಸಲಾಗದಷ್ಟು ನಷ್ಟ ಎದುರಾಗಲಿದೆ. ಹೀಗಾಗಿ ಉತ್ತರ ಕೊರಿಯಾ ಎಂಬ ಪಿಡುಗನ್ನು ತೊಲಗಿಸಲು ಇದು ಇತರೆ ರಾಷ್ಟ್ರಗಳು ಒಗ್ಗಡಲು ಸಕಾಲವಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


