ವಿದೇಶ

ಕುವೈತ್ ನಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಭಾರತೀಯರೂ ಸೇರಿ 15 ಸಾವು

ಕುವೈತ್ ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಭಾರತೀಯರೂ ಸೇರಿದಂತೆ ಒಟ್ಟು 15 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಕುವೈತ್ ನಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಭಾರತೀಯರೂ ಸೇರಿ 15 ಸಾವು
ಕುವೈತ್ ನಲ್ಲಿ ಭೀಕರ ರಸ್ತೆ ಅಪಘಾತ
Published On :
ಕುವೈತ್: ಕುವೈತ್ ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಭಾರತೀಯರೂ ಸೇರಿದಂತೆ ಒಟ್ಟು 15 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಮೂಲಗಳ ಪ್ರಕಾರ ಕುವೈತ್ ನಗರದಲ್ಲಿ ಪೆಟ್ರೋಲಿಯಂ ಕಾರ್ಖಾನೆಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಎರಡು ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 7 ಮಂದಿ ಭಾರತೀಯರು ಸೇರಿದಂತೆ ಒಟ್ಟು 15 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕೂಡಲೇ ಕುವೈತ್ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ ಹೆಚ್ಚಾಗಿದೆ ಎನ್ನಲಾಗಿದೆ.  ಅಂತೆಯೇ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಕಾರ್ಮಿಕರೆಲ್ಲರೂ ಕುವೈತ್ ಆಯಿಲ್ ಕಂಪನಿಯ ಕಾರ್ಮಿಕರು ಎಂದು ತಿಳಿದುಬಂದಿದೆ.
ಇನ್ನು ಮೃತ ಕಾರ್ಮಿಕರ ಪೈಕಿ 7ಭಾರತೀಯರಿದ್ದು, ಉಳಿದಂತೆ ಐದು ಮಂದಿ ಈಜಪ್ಟಿಯನ್ನರ ಮತ್ತು ಮೂವರು ಪಾಕಿಸ್ತಾನ ಮೂಲದ ಕಾರ್ಮಿಕರು ಎನ್ನಲಾಗಿದೆ. ಗಾಯಾಳುಗಳಲ್ಲಿ ಭಾರತೀಯರು ಮತ್ತು ಕುವೈತ್ ಪ್ರಜೆಗಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.