ವಿದೇಶ

ಉಗ್ರ ಪ್ರತಿಭಟನೆಯ ನಂತರ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ರದ್ದುಗೊಳಿಸಿದ ಬಾಂಗ್ಲಾ

ವಿದ್ಯಾರ್ಥಿಗಳ ಉಗ್ರ ಪ್ರತಿಭಟನೆಗೆ ಮಣಿದ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಅವರು ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ....

ಉಗ್ರ ಪ್ರತಿಭಟನೆಯ ನಂತರ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ರದ್ದುಗೊಳಿಸಿದ ಬಾಂಗ್ಲಾ
ವಿದ್ಯಾರ್ಥಿಗಳ ಪ್ರತಿಭಟನೆ
Published On :
ಢಾಕಾ: ವಿದ್ಯಾರ್ಥಿಗಳ ಉಗ್ರ ಪ್ರತಿಭಟನೆಗೆ ಮಣಿದ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ಅವರು ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಿರುವುದಾಗಿ ಬುಧವಾರ ಘೋಷಿಸಿದ್ದಾರೆ.
ಬಾಂಗ್ಲಾ ಸರ್ಕಾರ ವಿಶೇಷ ಸಮೂಹಗಳಿಗೆ ಮೀಸಲಾತಿ ಕಲ್ಪಿಸುವ ಕೋಟಾ ಸಿಸ್ಟಮ್‌ ಅನ್ನು ರದ್ದುಗೊಳಿಸಿದ್ದು, ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಸಮೂಹಗಳಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಉಗ್ರ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಗಳಿಗೆ ಕೊನೆಗೂ ಜಯ ಸಿಕ್ಕಿದೆ.
ಮೀಸಲಾತಿ ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳು  ಢಾಕಾದಲ್ಲಿ ಪ್ರಬಲ ಪ್ರತಿಭಟನೆ ನಡೆಸಿ, ಪ್ರಮುಖ ರಸ್ತೆಗಳನ್ನು ತಡೆದು ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದರು. 
ಢಾಕಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಹಿಂಸಾತ್ಮಕ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಪೊಲೀಸರನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಿತ್ತು. ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಘರ್ಷದಲ್ಲಿ  ಅಶ್ರುವಾಯ ಮತ್ತು ರಬ್ಬರ್‌ ಗುಂಡುಗಳು ಪ್ರಯೋಗಿಸಲ್ಪಟ್ಟ ಕಾರಣ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. 
ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಮಣಿದ ಪ್ರಧಾನಿ ಹಸೀನಾ ಅವರು  ಸರ್ಕಾರಿ ಉದ್ಯೋಗದಲ್ಲಿರುವ ಕೋಟಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.