ಕತುವಾ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ: ವಿಶ್ವಸಂಸ್ಥೆ
ಜಮ್ಮು-ಕಾಶ್ಮೀರದ ಕತುವಾದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದ 8 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ವಿಶ್ವಸಂಸ್ಥೆ ಶನಿವಾರ ಹೇಳಿದೆ...

Published On :
ವಿಶ್ವಸಂಸ್ಥೆ: ಜಮ್ಮು-ಕಾಶ್ಮೀರದ ಕತುವಾದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾಗಿದ್ದ 8 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ವಿಶ್ವಸಂಸ್ಥೆ ಶನಿವಾರ ಹೇಳಿದೆ.
ಪ್ರಕರಣ ಸಂಬಂಧ ಮಾತನಾಡಿರುವ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೋ ಗುಟೆರಸ್ ಅವರು, 8 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಮತ್ತು ಕೊಲೆ ಅತ್ಯಂತ ಭಯಾನಕವಾದದ್ದು, ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಹೇಳಿದ್ದಾರೆ.
ಭಯಾನಕ ಪ್ರಕರಣದ ವರದಿಗಳನ್ನು ನಾವು ಮಾಧ್ಯಮಗಳ ವರದಿಗಳಲ್ಲಿ ನೋಡಿದ್ದೇವೆ. ಪ್ರಕರಣದ ದುಷ್ಕರ್ಮಿಗಳಿಗೆ ಶಿಕ್ಷೆಯಾಗಿ ನ್ಯಾಯ ಸಿಗಲಿದೆ ಎಂಬು ಸಂಪೂರ್ಣ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿಶ್ವಸಂಸ್ಥೆUnited NationAntonio GuterresKathua gangrapeಕತುವಾ ಸಾಮೂಹಿಕ ಅತ್ಯಾಚಾರ ಪ್ರಕರಣಅಂಟೊನಿಯೋ ಗುಟೆರಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


