ವಿದೇಶ

ಪಾಕಿಸ್ತಾನ: ಕಪಾಳಕ್ಕೆ ಹೊಡೆಯೋ ಆಟದಲ್ಲಿ 6ನೇ ತರಗತಿ ವಿದ್ಯಾರ್ಥಿ ಸಾವು

ಕಪಾಳಕ್ಕೆ ಹೊಡೆಯೋ ಆಟ ಆಡುವ ಸಮಯದಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಪಾಕಿಸ್ತಾನ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ....

ಪಾಕಿಸ್ತಾನ: ಕಪಾಳಕ್ಕೆ ಹೊಡೆಯೋ ಆಟದಲ್ಲಿ 6ನೇ ತರಗತಿ ವಿದ್ಯಾರ್ಥಿ ಸಾವು
ಕಪಾಳಕ್ಕೆ ಹೊಡೆಯೋ ಆಟ: 6ನೇ ತರಗತಿ ವಿದ್ಯಾರ್ಥಿ ಬಲಿ
Published On :
ಲಾಹೋರ್: ಕಪಾಳಕ್ಕೆ ಹೊಡೆಯೋ ಆಟ ಆಡುವ ಸಮಯದಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಪಾಕಿಸ್ತಾನ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮೈನ್ ಚೆನುವಿನಲ್ಲಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಬಿಲಾಲ್ ಮತ್ತು ಅಮಿರ್ ಬಿಡುವಿನ ಸಮಯದಲ್ಲಿ ಕಪಾಳಕ್ಕೆ ಹೊಡೆಯೋ ಆಟ ಆಡುತ್ತಿದ್ದರು.
ಸ್ವಲ್ಪ ಸಮಯದ ನಂತರ ಇತರೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆಟವನ್ನು ನೋಡಲು ಮೈದಾನಕ್ಕೆ ಬಂದಿದ್ದಾರೆ.
ಆಟ ಶುರುವಾದಂತೆ ಒಬ್ಬರನ್ನ ಇನ್ನೊಬ್ಬರು ಎಷ್ಟು ಸಾಧ್ಯವೋ ಅಷ್ಟು ಗಟ್ಟಿಯಾಗಿ ಹೊಡೆಯಲು ಆರಂಭಿಸಿದ್ದಾರೆ. ಸ್ವಲ್ಪ ಸಮಯದ ನಂತರ ಅಮಿರ್ ನ ಬಲವಾದ ಏಟು ಬಿಲಾಲ್‍ನ ಕುತ್ತಿಗೆಗೆ ಬಿದ್ದು ಬಿಲಾಲ್ ಪ್ರಜ್ಞೆ ತಪ್ಪಿ ಕೆಳಕ್ಕೆ ಬಿದ್ದಿದ್ದಾನೆ. ಅರ್ಧ ಘಂಟೆ ತಡವಾಗಿ ಬಂದ ರಕ್ಷಣಾ ತಂಡ ಬಿಲಾಲ್ ನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.
ಘಟನೆ ನಡೆದ ತಕ್ಷಣ ಬಿಲಾಲ್ ನನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಶಾಲಾ ಸಿಬ್ಬಂದಿ ವಿಫಲವಾಗಿದೆ ಹಾಗಾಗಿ ಸಾವನ್ನಪ್ಪಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸ್ಲ್ಯಾಪ್ ಕಬಡ್ಡಿ ಅಥವಾ ಛೋಟಾ ಕಬಡ್ಡಿ ಎಂದು ಕರೆಯಲ್ಪಡುವ ಈ ಆಟವನ್ನು ಹೆಚ್ಚಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹೆಚ್ಚಾಗಿ ಆಡುತ್ತಾರೆ.ಈ ತಿಂಗಳ ಆರಂಭದಲ್ಲಿ ಘಟನೆ ನಡೆದಿದ್ದು, ನಿನ್ನೆ ವಿಡಿಯೋ ರೀಲಿಸ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.