ಸಿರಿಯಾದಲ್ಲಿ ಅಮೆರಿಕ ನಡೆಸುತ್ತಿರುವ ಕಾರ್ಯಾಚರಣೆ ಬದಲಾಗಿಲ್ಲ: ಶ್ವೇತ ಭವನ
ಸಿರಿಯಾದಲ್ಲಿ ಅಮೆರಿಕ ನಡೆಸುತ್ತಿರುವ ಕಾರ್ಯಾಚರಣೆ ಬದಲಾಗಿಲ್ಲ, ಶೀಘ್ರದಲ್ಲಿಯೇ ಸೇನೆ ಅಮೆರಿಕಾಕ್ಕೆ ಮರಳಲಿದೆ ಎಂದು ಶ್ವೇತಭವನ ಸೋಮವಾರ ಹೇಳಿದೆ...

Published On :
ವಾಷಿಂಗ್ಟನ್; ಸಿರಿಯಾದಲ್ಲಿ ಅಮೆರಿಕ ನಡೆಸುತ್ತಿರುವ ಕಾರ್ಯಾಚರಣೆ ಬದಲಾಗಿಲ್ಲ, ಶೀಘ್ರದಲ್ಲಿಯೇ ಸೇನೆ ಅಮೆರಿಕಾಕ್ಕೆ ಮರಳಲಿದೆ ಎಂದು ಶ್ವೇತಭವನ ಸೋಮವಾರ ಹೇಳಿದೆ.
ಸಿರಿಯಾದಲ್ಲಿ ಅಮೆರಿಕ ನಡೆಸುತ್ತಿರುವ ಕಾರ್ಯಚರಣೆ ಬದಲಾಗಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದು, ಅಮೆರಿಕಾ ಸೇನೆ ಸಾಧ್ಯವಾದಷ್ಟು ಬೇಗ ಮರಳಿ ಬರಲಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್ ಹೇಳಿದ್ದಾರೆ.
ಸಿರಿಯಾದಲ್ಲಿ ನೆಲೆಯೂರಿರುವ ಇಸಿಸ್ ನ್ನು ಸಂಪೂರ್ಣವಾಗಿ ನಾಶಗೊಳಿಸಲು ಬದ್ಧರಾಗಿದ್ದು, ಮತ್ತೆಂದು ಇಸಿಸ್ ಕಾರ್ಯಾಚರಣೆ ನಡೆಸದಂತೆ ಮಾಡಲು ನಿರ್ಧರಿಸಿದ್ದೇವೆ.ನಮ್ಮ ಮಿತ್ರ ರಾಷ್ಟ್ರಗಳು ಹಾಗೂ ಪಾಲುದಾರರು ರಾಷ್ಟ್ರದ ಭದ್ರತೆಗಾಗಿ ಸೇನೆ ಮತ್ತು ಆರ್ಥಿಕವಾಗಿ ಹೆಚ್ಚಿನ ಜವಾಬ್ದಾರಿಗಳನ್ನು ತೆಗೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೇವೆಂದು ತಿಳಿಸಿದ್ದಾರೆ.
ಈ ಹಿಂದೆ ಹೇಳಿಕೆ ನೀಡಿದ್ದ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರು, ಟ್ರಂಪ್ ಅವರೊಂದಿಗೆ ಪ್ಯಾರೀಸ್ ಈಗಾಗಲೇ ಮಾತುಕತೆ ನಡೆಸಿದ್ದು, ದೀರ್ಘಾಕಾಲಿಕವಾಗಿ ಸಿರಿಯಾದಲ್ಲಿ ಕಾರ್ಯಾಚರಣೆ ನಡೆಸಲು ಜೊತೆಗಿರುವಂತೆ ಮನವೊಲಿಸಲಾಗಿದೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


