ವಿದೇಶ

ಮತದಾನ ನನ್ನ ಹಕ್ಕು, ಆದರೆ ಭಾರತಕ್ಕೆ ಬರಲು ಸಾಧ್ಯವಿಲ್ಲ: ವಿಜಯ್‌ ಮಲ್ಯ

ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರುಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ...

ಮತದಾನ ನನ್ನ ಹಕ್ಕು, ಆದರೆ ಭಾರತಕ್ಕೆ ಬರಲು ಸಾಧ್ಯವಿಲ್ಲ: ವಿಜಯ್‌ ಮಲ್ಯ
ವಿಜಯ್ ಮಲ್ಯ
Published On :
ಲಂಡನ್‌: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರುಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ, ವಿಜಯ್‌ ಮಲ್ಯ, ಮೇ 12ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವುದು ನನ್ನ ಪ್ರಜಾಸತ್ತಾತ್ಮಕ ಹಕ್ಕು ಎಂದಿದ್ದಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ತಾನು ಭಾರತಕ್ಕೆ ಬರಲು ಸಾಧ್ಯವಿಲ್ಲ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಮದ್ಯದ ದೊರೆ,  ಕರ್ನಾಟಕ ರಾಜಕಾರಣದ ನನಗೆ ಹೆಚ್ಚು ಗೊತ್ತಿಲ್ಲ. ಹಾಗಾಗಿ ಅಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ  ಯಾವುದೇ ಪ್ರತಿಕ್ರಿಯೆ ನೀಡಲಾರೆ. ಹಾಗಿದ್ದರೂ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವುದು ನನ್ನ ಪ್ರಜಾಸತ್ತಾತ್ಮಕ ಹಕ್ಕಾಗಿದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಮತದಾನ ಮಾಡುವುದು ನನಗೆ ಸಾಧ್ಯವಾಗದು ಎಂದು ಹೇಳಿದ್ದಾರೆ.
ಕರ್ನಾಟಕದಿಂದ ಎರಡು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ವಿಜಯ್ ಮಲ್ಯ ಅವರು ಈಗ ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದಾರೆ.
ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಲಂಡನ್ ವೆಸ್ಟ್‌ ಮಿನಿಸ್ಟರ್‌ ಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಸದ್ಯದಲ್ಲೇ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.