ಟ್ರಂಪ್ ನೊಬೆಲ್ ಶಾಂತಿ ಪ್ರಶಸ್ತಿಯನ್ನು ತೆಗೆದುಕೊಳ್ಳಬಹುದು: ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್-ಜಾಂಗ್-ಉನ್ ಅವರೊಂದಿಗೆ ಐತಿಹಾಸಿಕ ಮಾತುಕತೆ ನಡೆಸಿದ್ದ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ನೊಬೆಲ್ ನಿರೀಕ್ಷೆಯನ್ನು ತಳ್ಳಿಹಾಕಿದ್ದು, ಡೊನಾಲ್ಡ್ ಟ್ರಂಪ್

Published On :
ಸಿಯೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್-ಜಾಂಗ್-ಉನ್ ಅವರೊಂದಿಗೆ ಐತಿಹಾಸಿಕ ಮಾತುಕತೆ ನಡೆಸಿದ್ದ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ನೊಬೆಲ್ ನಿರೀಕ್ಷೆಯನ್ನು ತಳ್ಳಿಹಾಕಿದ್ದು, ಡೊನಾಲ್ಡ್ ಟ್ರಂಪ್ ಬೇಕಿದ್ದರೆ ಶಾಂತಿ ಪ್ರಶಸ್ತಿಯನ್ನು ತೆಗೆದುಕೊಳ್ಳಬಹುದೆಂದು ಹೇಳಿದ್ದಾರೆ.
ಉತ್ತರ ಕೊರಿಯಾ ಹಾಗೂ ದಕ್ಷಿಣ ಕೊರಿಯಾ ನಡುವಿನ ದೀರ್ಘಕಾಲದ ಬಿಕ್ಕಟ್ಟನ್ನು ಬಗೆಹರಿಸುವ ನಿಟ್ಟಿನಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್-ಜಾಂಗ್-ಉನ್ ಅವರೊಂದಿಗೆ ಐತಿಹಾಸಿಕ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಅವರು ನೊಬೆಲ್ ಪ್ರಶಸ್ತಿಗೆ ಅರ್ಹ ಎಂಬ ಮಾತು ಕೇಳಿಬರುತ್ತಿತ್ತು.
ಸರ್ವಾಧಿಕಾರಿ ಕಿಮ್ ಜಾಂಗ್ Il ಹಾಗೂ ದಕ್ಷಿಣ ಕೊರಿಯಾದ ಅಧ್ಯಕ್ಷರಾದ ಕಿಮ್ ಡೇ-ಜಂಗ್ ಮತ್ತು ರೋಹ್ ಮೊ-ಹ್ಯುನ್ 2000 ಹಾಗೂ 2007 ರಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬಿಕ್ಕಟ್ಟು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಕ್ಕಾಗಿ ಕಿಮ್ ಡೇ-ಜಂಗ್ 2000 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದರು. ಈಗ ದಕ್ಷಿಣ ಕೊರಿಯಾ ಅಧ್ಯಕ್ಷರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ದ.ಕೊರಿಯಾದ ಮಾಜಿ ಅಧ್ಯಕ್ಷ ಕಿಮ್ ಡೇ-ಜಂಗ್ ಅವರ ಪತ್ನಿ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಸಹ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಬಹುದು ಎಂದು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದ.ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬೇಕಿದ್ದರೆ ಪ್ರಶಸ್ತಿಯನ್ನು ಸ್ವೀಕರಿಸಬಹುದು ಎಂದು ಹೇಳಿದ್ದಾರೆ. ಅಮೆರಿಕ ಹಾಗೂ ಉತ್ತರ ಕೊರಿಯಾ ನಡುವೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುವುದಕ್ಕೂ ದಕ್ಷಿಣ ಕೊರಿಯಾದ ಜನಪ್ರಿಯ ನಾಯಕ, ಅಧ್ಯಕ್ಷ ಮೂ ಜೇ-ಇನ್ ಬಯಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Nobel Peace Prizeದಕ್ಷಿಣ ಕೊರಿಯಾನೊಬೆಲ್ ಪ್ರಶಸ್ತಿDonald Trumpಡೊನಾಲ್ಡ್ ಟ್ರಂಪ್Moon Jae-inSouth Korea presidentಮೂನ್ ಜೆ-ಇನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


