ವಿದೇಶ

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಇತಿಹಾಸ ನಿರ್ಮಿಸುತ್ತಾರಾ ಇಮ್ರಾನ್ ಖಾನ್?

ಪಾಕಿಸ್ತಾನದ ಮಾಜಿ ಕ್ರಿಕೆಟಿಗ, ನಿಯೋಜಿತ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಇತಿಹಾಸ ನಿರ್ಮಿಸುತ್ತಾರಾ ಇಮ್ರಾನ್ ಖಾನ್?
ಇಮ್ರಾನ್ ಖಾನ್
Published On :
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಕ್ರಿಕೆಟಿಗ, ನಿಯೋಜಿತ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂದು  ಹೇಳಲಾಗುತ್ತಿದೆ. 
ಇಮ್ರಾನ್ ಖಾನ್ ಅವರ ಪದಗ್ರಹಣ ಕಾರ್ಯಕ್ರಮ ಆ.11 ಕ್ಕೆ ನಿಗದಿಯಾಗಿತ್ತು. ಆದರೆ ಇತ್ತೀಚಿನ ವರದಿಗಳ ಪ್ರಕಾರ ಆ.14 ಅಥವಾ 15 ರಂದು ನಡೆಯುವ ಸಾಧ್ಯತೆ ಇದೆಯಂತೆ. ಪಾಕಿಸ್ತಾನದ ಡಾನ್ ಪತ್ರಿಕೆಯ ವರದಿ ಕಾನೂನು ಸಚಿವ ಅಲಿ ಝಫರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ತಾವು ಹಾಗು ಹಂಗಾಮಿ ಪ್ರಧಾನಿ ನಾಸಿರ್-ಉಲ್-ಮುಲ್ಕ್ ಇಬ್ಬರೂ ಇಮ್ರಾನ್ ಖಾನ್ ಅವರು ದೇಶದ ಸ್ವಾತಂತ್ರ್ಯ ದಿನಾಚರಣೆಯಂದು ಅಂದರೆ ಆ.14 ರಂದು ಪ್ರಮಾಣವಚನ ಸ್ವೀಕರಿಸಲಿ ಎಂಬ ಅಭಿಪ್ರಾಯ ಹೊಂದಿರುವುದಾಗಿ ಹೇಳಿದ್ದಾರೆ. 
ಪಾಕಿಸ್ತಾನದ ರಾಷ್ಟ್ರೀಯ ಸಂಸತ್ ಸಭೆಯನ್ನು ಆ.11 ಅಥವಾ 12 ರಂದು ಕರೆಯಬಹುದಾಗಿದೆ. ಈ ಬಳಿಕ ಅಂದರೆ ಆ.14 ರಂದು ಇಮ್ರಾನ್ ಖಾನ್ ಅಧಿಕಾರ ವಹಿಸಿಕೊಳ್ಳಬಹುದು ಎಂದು ಅಲಿ ಜಫರ್ ಅವರು ಹೇಳಿದ್ದಾರೆ. ಒಂದು ವೇಳೆ ಆ.12 ರಂದು ಸಂಸತ್ ಸಭೆ ಕರೆದರೆ ಇಮ್ರಾನ್ ಖಾನ್ ಆ.15 ರಂದು ಪ್ರಮಾಣ ವಚನ ಸ್ವೀಕರಿಸಬಹುದು ಎಂದಿದ್ದಾರೆ. 
ಇಮ್ರಾನ್ ಖಾನ್ ಅವರು ದೇಶದ ನೂತನ ಪ್ರಧಾನಿಯಾಗಿ ಸ್ವಾತಂತ್ರ್ಯ ದಿನಾಚರಣೆಯಂದು ಅಧಿಕಾರ ವಹಿಸಿಕೊಂಡರೆ ಹೊಸ ಸರ್ಕಾರ ಮತ್ತಷ್ಟು ಉತ್ಸಾಹದಿಂದ ದೇಶದ ಅಭಿವೃದ್ಧಿಯೆಡೆಗೆ ಕಾರ್ಯನಿರ್ವಹಿಸಬಹುದು ಎಂಬುದು ಜಫರ್ ಅವರ ಅಭಿಪ್ರಾಯವಾಗಿದೆ. ಇಮ್ರಾನ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.