ವಿಶ್ವಸಂಸ್ಥೆ ಮಾಜಿ ಪ್ರಧಾನ ಕಾರ್ಯದರ್ಶಿ ಕೊಫಿ ಅನ್ನನ್ ನಿಧನ
ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಕೊಫಿ ...

ಯುನೈಟೆಡ್ ನೇಷನ್: ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಕೋಫಿ ಅನ್ನನ್ ಶನಿವಾರ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ವಿಶ್ವದ ಅತ್ಯಂತ ಅಗ್ರಸ್ಥಾನವಾದ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ ಮೊದಲ ಕಪ್ಪು ವರ್ಣೀಯ ಆಫ್ರಿಕನ್ ಕೋಫಿ ಅನ್ನನ್ ಆಗಿದ್ದಾರೆ. ಇವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ 1997ರಿಂದ 2006ರವರೆಗೆ ಸೇವೆ ಸಲ್ಲಿಸಿದ್ದರು.
ನಂತರ ಅವರು ಸಿರಿಯಾದ ವಿಶ್ವಸಂಸ್ಥೆಯ ವಿಶೇಷ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. ಈ ಸಮಯದಲ್ಲಿ ಸಿರಿಯಾ ಸಂಘರ್ಷಕ್ಕೆ ಶಾಂತಿಯುತ ಪರಿಹಾರವನ್ನು ಹುಡುಕಲು ಅವರು ಪ್ರಯತ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


